ಅಂಬೇಡ್ಕರ್, ದಲಿತರ ಕುರಿತ ಅವಮಾನಕಾರಿ ಸ್ಕಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈನ್ ವಿವಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಬೆಂಗಳೂರು: ಅಂಬೇಡ್ಕರ್, ದಲಿತರ ಕುರಿತ ಅವಮಾನಕಾರಿ ಸ್ಕಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈನ್ ವಿವಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.
ವಿದ್ಯಾರ್ಥಿಗಳ ವಿರುದ್ಧದ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿದ್ಯಾರ್ಥಿಗಳೊಂದಿಗೆ ಇಬ್ಬರು ಸಿಬ್ಬಂದಿಗಳೂ ಪ್ರಕರಣವನ್ನು ಎದುರಿಸುತ್ತಿದ್ದಾರೆ.
ಸಿಬ್ಬಂದಿಗಳ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಜು.05 ರಂದು ತಡೆ ನೀಡಿತ್ತು ಈಗ ವಿದ್ಯಾರ್ಥಿಗಳ ವಿರುದ್ಧದ ತನಿಖೆಗೆ ತಡೆ ನೀಡಿದೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನೀಡಿದ ದೂರಿನ ಮೇರೆಗೆ ವಿದ್ಯಾರ್ಥಿಗಳು ದಲಿತರು ಮತ್ತು ಬಿ ಆರ್ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಸ್ಕಿಟ್ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಕಿಟ್ ಪ್ರದರ್ಶನ ನಡೆಸಿದ್ದರು. ಫೆ.10 ರಂದು ಎಫ್ಐಆರ್ ದಾಖಲಾಗಿತ್ತು.