Home Uncategorized ಅತಿಕ್ರಮಣ ಸಮೀಕ್ಷೆ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ: ಕೆ.ಎ.ದಯಾನಂದ

ಅತಿಕ್ರಮಣ ಸಮೀಕ್ಷೆ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ: ಕೆ.ಎ.ದಯಾನಂದ

24
0
Advertisement
bengaluru

ಇಲಾಖೆ ಮಳೆನೀರು ಚರಂಡಿಗಳ ಅತಿಕ್ರಮಣಗಳ ಮರು ಸಮೀಕ್ಷೆಯನ್ನು ಶೇ 90 ರಷ್ಟು ಪೂರ್ಣಗೊಳಿಸಿದ್ದು, ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮಾಹಿತಿ ನೀಡಿದ್ದಾರೆ. ಬೆಂಗಳೂರು: ಇಲಾಖೆ ಮಳೆನೀರು ಚರಂಡಿಗಳ ಅತಿಕ್ರಮಣಗಳ ಮರು ಸಮೀಕ್ಷೆಯನ್ನು ಶೇ 90 ರಷ್ಟು ಪೂರ್ಣಗೊಳಿಸಿದ್ದು, ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಕ್ರಮಣಗಳ ಮರು ಸಮೀಕ್ಷೆಯನ್ನು ಇಲಾಖೆ ಪೂರ್ಣಗೊಳಿಸಿದ್ದು, ಸಂಬಂಧಪಟ್ಟ ತಹಶೀಲ್ದಾರ್‌ಗಳು ವಿಚಾರಣೆ ನಡೆಸಿ ಒತ್ತುವರಿ ತೆರವಿಗೆ ಆದೇಶ ಹೊರಡಿಸಲಿದ್ದಾರೆಂದು ಹೇಳಿದ್ದಾರೆ.

ಕರ್ನಾಟಕ ಭೂಕಂದಾಯ ಕಾಯಿದೆಯ ಸೆಕ್ಷನ್ 104 ರ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಬೇಕಿದೆ. ನೋಟಿಸ್ ಬಳಿಕ ಆದೇಶಗಳನ್ನು ನೀಡಬೇಕ. ನಂತರ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ತಿಳಿಸಬೇಕು. 15 ದಿನಗಳಲ್ಲಿ ಮಾಲೀಕರಿಗೆ ನೋಟಿಸ್‌ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಿ ಮುಂದಿನ ಕ್ರಮಕೈಗೊಳ್ಳಲು ಬಿಬಿಎಂಪಿಗೆ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ, ತಹಶೀಲ್ದಾರ್ ಅವರ ಆದೇಶದ ಆಧಾರದ ಮೇಲೆ ಜಂಟಿ ಪರಿಶೀಲನೆ ನಡೆಸಿ ನಂತರ ಕಾರ್ಯಾಚರಣೆಗೆ ದಿನಾಂಕವನ್ನು ನಿಗದಿಪಡಿಸಲು ಸಂಬಂಧಿಸಿದ ಮುಖ್ಯ ಎಂಜಿನಿಯರ್‌ಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದೆ.

bengaluru bengaluru

bengaluru

LEAVE A REPLY

Please enter your comment!
Please enter your name here