Home Uncategorized ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ, ಖಿನ್ನತೆ ಶಂಕೆ!

ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ, ಖಿನ್ನತೆ ಶಂಕೆ!

18
0
Advertisement
bengaluru

ಖಿನ್ನತೆಗೊಳಗಾಗಿದ್ದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ ಮೆಂಟ್ ನ 19ನೇ ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ. ಬೆಂಗಳೂರು: ಖಿನ್ನತೆಗೊಳಗಾಗಿದ್ದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ ಮೆಂಟ್ ನ 19ನೇ ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನ ತಲಘಟ್ಟಪುರದ ಹಾಲಿಡೇ ವಿಲೇಜ್ ರಿಜಾರ್ಟ್ ರಸ್ತೆಯಲ್ಲಿರುವ ಪೂರ್ವ ಹೈಲ್ಯಾಂಡ್ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದ್ದು, ಸುಮಾರು 40 ವರ್ಷದ ಚರಿಷ್ಮಾ ಸಿಂಗ್ ಎಂಬ ಮಹಿಳೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Bengaluru | A 40-year-old woman, Charisma Singh, died after jumping from the 19th floor of Purva highland apartment, Talaghattapura. She was suffering from depression. Deceased’s body is being taken to hospital. Prima facie, it appears to be a case of suicide: DCP South Bengaluru
— ANI (@ANI) December 25, 2022

ಖಿನ್ನತೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 1 ಗಂಟೆ ಸಂದರ್ಭದಲ್ಲಿ ಅಪಾರ್ಟ್‍ಮೆಂಟ್‍ನ 19 ನೇ ಮಹಡಿಯಿಂದ ಹಾರಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಲಘಟ್ಟಪುರ ಪೊಲೀಸರು ತಿಳಿಸಿದ್ದಾರೆ. 

bengaluru bengaluru

ಇದನ್ನೂ ಓದಿ: ಬೆಂಗಳೂರು: ಟೆಕ್ಕಿಯ ಖಾಸಗಿ ಚಿತ್ರಗಳನ್ನು ಬಳಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ, ಪೆನ್‌ಡ್ರೈವ್ ವಶಕ್ಕೆ

ಇದನ್ನು ಕಂಡ ಅಪಾರ್ಟ್‍ಮೆಂಟ್‍ನ ನಿವಾಸಿಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬರುವಷ್ಟರಲ್ಲಿ ಚರಿಸ್ಮಾ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ. ಶವವನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು ತಲಘಟ್ಟಪುರ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


bengaluru

LEAVE A REPLY

Please enter your comment!
Please enter your name here