Home Uncategorized ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

6
0
bengaluru

ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ವಿಶೇಷ ಸತ್ರ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹಾವೇರಿ: ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ವಿಶೇಷ ಸತ್ರ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಲಕ್ಷ್ಮೆಶ್ವರ ತಾಲೂಕಿನ ಸಂತೆಶಿಗ್ಲಿ ಗ್ರಾಮದ ಯಲ್ಲಪ್ಪ ಕೊಂಚಿಕೊರವರ (42) ಶಿಕ್ಷೆಗೆ ಒಳಗಾದ ಅಪರಾಧಿ. ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ನಿಂಗನಗೌಡ ಪಾಟೀಲ್ ಅವರು ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಜೊತೆಗೆ 1.60 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದ್ದಾರೆ.

ಅಪರಆಧಿ ಈರಪ್ಪ ಸಂತ್ರಸ್ತ ಬಾಲಕಿಯನ್ನು ದೂರವಾಣಿ ಮೂಲಕ ಪರಿಚಯ ಮಾಡಿಕೊಂಡಿದ್ದು, 2020ರ ಜುಲೈ 19ರಂದು ಆಕೆಯನ್ನು ಅಪಹರಿಸಿ ಚಿಕ್ಕಮಗಳೂರು ಮತ್ತು ಸಕಲೇಶಪುರ ಕಾಫಿ ಎಸ್ಟೇಟ್‌ಗೆ ಕರೆದೊಯ್ದು ಮನೆಯೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂತ್ರಸ್ತ ಬಾಲಕಿಗೆ ದಂಡದ ಮೊತ್ತದಿಂದ 1.50 ಲಕ್ಷ ರೂಪಾಯಿ ಮತ್ತು ರಾಜ್ಯದ ಸಂತ್ರಸ್ತ ಪರಿಹಾರ ಯೋಜನೆಯಿಂದ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here