ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಹೇಳಿಕೆ ಮಂಗಳವಾರ ತಿಳಿಸಿದೆ. ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಹೇಳಿಕೆ ಮಂಗಳವಾರ ತಿಳಿಸಿದೆ.
ಆಗಸ್ಟ್ 10 ರಿಂದ ಆಗಸ್ಟ್ 20ರವರೆಗೆ ಭೇಟಿ ನೀಡುವವರಿಗೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಪ್ರವೇಶಿಸಲು ಅಥವಾ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂದರ್ಶಕರ ಪ್ರವೇಶ ಟಿಕೆಟ್‌ಗಳನ್ನು ಖರೀದಿಸಲು ಅವಕಾಶ ನೀಡಲಾಗುವುದಿಲ್ಲ ಎನ್ನಲಾಗಿದೆ.
ಮುಂಬರುವ ಸ್ವಾತಂತ್ರ್ಯ ದಿನಾಚರಣೆಯ ಭದ್ರತೆ ಹೆಚ್ಚಿಸಲು ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಹೇಳಲಾಗಿದೆ.