Home Uncategorized ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

19
0

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ತನಿಖೆಗೆ ಮಧ್ಯಂತರ ತಡೆ ನೀಡಿ  ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ  ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 

ತನಿಖಾಧಿಕಾರಿ ಫೆ.24ರೊಳಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಲಿ, ಅಲ್ಲಿಯವರೆಗೂ ಸಿಬಿಐ ತನಿಖೆ ಮುಂದುವರೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಗೆ ಸ್ವಲ್ಪ ದಿನಗಳ ಸಮಾಯವಕಾಶ ದೊರೆತಿದ್ದು, ಸದ್ಯ ನಿರಾಳರಾಗಿದ್ದಾರೆ.

ಇದನ್ನೂ ಓದಿ: ಪುತ್ರಿಗೆ ನೋಟಿಸ್: ಗಂಭೀರ ವಿಷಯಗಳ ಕಡೆ ಗಮನಹರಿಸುವಂತೆ ಸಲಹೆ ನೀಡಿ ಸಿಬಿಐಗೆ ಪತ್ರ ಬರೆಯುತ್ತೇನೆ- ಡಿಕೆ ಶಿವಕುಮಾರ್

ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.

LEAVE A REPLY

Please enter your comment!
Please enter your name here