ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದ ಬಳಕೆ ಮೂಲಕ ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು. ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದ ಬಳಕೆ ಮೂಲಕ ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕಲಿ ಸುದ್ದಿಗಳ ಹರಡುವುದರಲ್ಲಿ ಕೆಲವರು ನಿರತರಾಗಿದ್ದಾರೆ. ಅದು ರಾಜಕೀಯ ಇರಬಹುದು ಅಥವಾ ಸಮಾಜದ ಶಾಂತಿ ಕದಡುವ ವಿಚಾರ ಇರಬಹುದು. ಸುಳ್ಳು ಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಹೇಳಿದರು.
ಸಂಬಂಧವೇ ಇಲ್ಲದ ಪೋಟೋಗಳನ್ನು ಹಾಕಿ ಸಂಬಂಧ ಕಲ್ಪಿಸುವುದು ನಡೆಯುತ್ತಿದೆ. ಸರ್ಕಾರ ರಚನೆ ಆದಮೇಲೆ ಫೇಕ್ ನ್ಯೂಸ್ ಗಮನಿಸಿದ್ದೇವೆ. ಇದನ್ನು ನಿಲ್ಲಿಸದಿದ್ದರೆ ಬಹಳಷ್ಟು ಸಮಸ್ಯೆ ಆಗಲಿದೆ ಎಂದು ಎಚ್ಚರಿಸಿದರು.
ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. ಸೈಬರ್ ಕಾನೂನಿನಲ್ಲಿ ತಿದ್ದುಪಡಿ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸೈಬರ್ ಲಾ ನಲ್ಲಿ ಅವಕಾಶ ಇದ್ರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನದ ಮೂಲಕ ಫೇಕ್ ನ್ಯೂಸ್ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸುಳ್ಳು ಸುದ್ದಿ ಹರಡುವವರ ಮೇಲೆ ಶಿಕ್ಷೆಗೆ ಸೂಕ್ತ ಕಾನೂನು ಕೂಡ ತರುತ್ತೇವೆ ಎಂದು ಹೇಳಿದರು.
ಬಿಟ್ ಕಾಯಿನ್ ವಿಚಾರ ಮತ್ತು ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ. ಇದರ ತನಿಖೆಯನ್ನು ಹಿಂದಿನ ಸರ್ಕಾರ ಮುಕ್ತಾಯಗೊಳಿಸಿದೆ. ನಾವು ಮರು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡಬೇಕ ಅಥವಾ ಬೇರೆ ತನಿಖಾ ಸಂಸ್ಥೆಗೆ ಕೊಡಬೇಕಾ ನಿರ್ಧರಿಸುತ್ತೇವೆ. ಸದ್ಯ ಸಿಐಡಿ ಪ್ರಬಲವಾಗಿದೆ. ಬೇರೆ ಬೇರೆ ಏಜೆನ್ಸಿಗಳ ಸಹಕಾರವನ್ನು ಸಿಐಡಿಗೆ ಕೊಡಿಸಲಾಗುವುದು. ಸಿಐಡಿಗೆ ಕೊಡೋ ಬಗ್ಗೆ ತೀರ್ಮಾನ ಮಾಡಬೇಕಾಗಿದೆ ಎಂದು ತಿಳಿಸಿದರು.
ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ತನಿಖೆ ಮಾಡಿಸುತ್ತೇವೆ. ಇದೇ ಮಾತನ್ನು ಮುಖ್ಯಮಂತ್ರಿಗಳು ಕೂಡ ಹೇಳಿದ್ದಾರೆ. ಪಿಎಸ್ಐ ಪ್ರಕರಣ ಕೋರ್ಟ್ ಜಡ್ಡ್ ಮೆಂಟ್ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ. ಎರಡು ಬಾರಿ ಬಿಟ್ ಕಾಯಿನ್ ಹಗರಣ ಸಂಬಂಧ ಸಭೆ ಮಾಡಿದ್ದೇನೆ. ತಾಂತ್ರಿಕವಾಗಿ ಯಾರಿಗೆಲ್ಲ ಹಣ ಹೋಗಿದೆ? ಕಾನೂನು ಬಾಹಿರವಾಗಿ ಸಾವಿರಾರು ಕೋಟಿ ಹಣ ವರ್ಗಾವಣೆಯಾಗಿದೆ. ಕೆಲವೊಂದು ವಿಚಾರಗಳನ್ನು ಹೇಳಲು ಆಗಲ್ಲ ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ತನಿಖೆ ಮಾಡಿಸುತ್ತೇವೆ. ಇದೇ ಮಾತನ್ನು ಸಿಎಂ ಕೂಡ ಹೇಳಿದ್ದಾರೆ. ಪಿಎಸ್ಐ ಪ್ರಕರಣ ಕೋರ್ಟ್ ಜಡ್ಡ್ ಮೆಂಟ್ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ ಎಂದರು.ಹಗರಣದ ಬಗ್ಗೆ ಬೆಳಕು ಚೆಲ್ಲುತ್ತೇವೆ ಎಂದರು.
ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದ ಬಳಕೆ ಸೇರಿದಂತೆ ಎಲ್ಲ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ಹೇಳಿದ್ದಾರೆ. ಅಂತಹ ಪ್ರಕರಣಗಳನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರವು ಕಾನೂನನ್ನು ತಿದ್ದುಪಡಿ ಮಾಡುತ್ತದೆ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿವಿಧ ವೇದಿಕೆಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ ಮತ್ತು ಇದು ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರುವುದರಿಂದ ಅದನ್ನು ತಡೆಯಬೇಕು. “ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡುವವರನ್ನು ಗುರುತಿಸಲು ಮತ್ತು ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು AI ಬಳಕೆ ಸೇರಿದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ನಾವು ನಿರ್ಧರಿಸಿದ್ದೇವೆ” ಎಂದು ಅವರು ವಿವರಿಸಿದರು.