Home ನಗರ ಆರ್.ಆರ್ ನಗರ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಹೊರಗಿನವರು ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ

ಆರ್.ಆರ್ ನಗರ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಹೊರಗಿನವರು ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ

58
0

ಬೆಂಗಳೂರು:

ಆರ್ ಆರ್ ನಗರದಲ್ಲಿ ಇಂದು ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ಅವಕಾಶವಿರುವುದಿಲ್ಲ. ಮತದಾರರು ಹೊರತುಪಡಿಸಿ, ಕ್ಷೇತ್ರದಲ್ಲಿ ಮುಖಂಡರು, ನಾಯಕರು ಇದ್ದರೇ ತಕ್ಷಣ ಜಾಗ ಖಾಲಿ ಮಾಡಬೇಕು. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಆರ್‌ ಆರ್ ನಗರ ಚುನಾವಣೆಯ ಬಹಿರಂಗ ಪ್ರಚಾರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಸಿದ್ಧತೆ ಹಾಗೂ ಭದ್ರತೆ ಬಗ್ಗೆ ನಗರದಲ್ಲಿಂದು ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮಂಜುನಾಥ್ ಪ್ರಸಾದ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಆರ್ ಆರ್ ನಗರದಲ್ಲಿ ಸಂಜೆ 6 ಗಂಟೆಯ ನಂತರ ಮುಖಂಡರು, ನಾಯಕರು ಇರುವುದಕ್ಕೆ ಅವಕಾಶವಿರುವುದಿಲ್ಲ. ಯಾರಾದರೂ ಕ್ಷೇತ್ರದಲ್ಲಿ ಕಾಣಿಸಿಕೊಂಡರೇ ದೂರು ದಾಖಲಿಸಿಕೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here