Home Uncategorized ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್

0
0
Advertisement
bengaluru

ಮುಂಬೈ: ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ ಅಶೋಕ್ ಚವಾಣ್ ಸೋಮವಾರ ಕಾಂಗ್ರೆಸ್ ಪಕ್ಷಕ್ಜೆ ರಾಜಿನಾಮೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾನಾ ಪಟೋಲೆಗೆ ರಾಜಿನಾಮೆ ಪತ್ರ ರವಾನಿಸಿರುವ ಅಶೋಕ್ ಚೌಹಾಣ್, “ಫೆಬ್ರವರಿ 12, 2024ರ ಮಧ್ಯಾಹ್ನದಿಂದ ಅನ್ವಯವಾಗುವಂತೆ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.

65 ವರ್ಷ ವಯಸ್ಸಿನ ಅಶೋಕ್ ಚೌಹಾಣ್ ಈ ಪತ್ರದೊಂದಿಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜಿನಾಮೆ ಸಲ್ಲಿಸಿದ್ದು, ರಾಜಿನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷರಿಗೆ ರವಾನಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here