Home Uncategorized ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್​ ನಿಷೇಧ, ಷೇಧಾಜ್ಞೆ ಜಾರಿ, ಆಲ್ ದಿ ಬೆಸ್ಟ್ ಮಕ್ಕಳೇ..

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್​ ನಿಷೇಧ, ಷೇಧಾಜ್ಞೆ ಜಾರಿ, ಆಲ್ ದಿ ಬೆಸ್ಟ್ ಮಕ್ಕಳೇ..

13
0
bengaluru

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಮಾರ್ಚ್ 9 ಗುರುವಾರ ಆರಂಭವಾಗುತ್ತಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ.  ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಮಾರ್ಚ್ 9 ಗುರುವಾರ ಆರಂಭವಾಗುತ್ತಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. 

ಹಿಜಾಬ್ ಗಿಲ್ಲ ಅವಕಾಶ: ಈ ಬಾರಿ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರುತ್ತದೆ. 

ಪರೀಕ್ಷೆಗೆ ಹಾಜರಾಗುವ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ. ಕಳೆದ ವರ್ಷದ ನಿಯಮ ಈ ಬಾರಿಯೂ ಮುಂದುವರಿಯಲಿದ್ದು, ಒಂದೊಮ್ಮೆ ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಸಮವಸ್ತ್ರ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಕಳೆದ ವರ್ಷ ಹಿಜಾಬ್​ಗೆ ಪಟ್ಟು ಹಿಡಿದಿದ್ದ 6 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿರಲಿಲ್ಲ.

ರಾಜ್ಯದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,716 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ನಿಷೇಧಾಜ್ಞೆ ಜಾರಿ:  ಪರೀಕ್ಷಾ ಕೇಂದ್ರದ 200 ಮೀಟರ್​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತದಳ, 525 ತಾಲೂಕು ಜಾಗೃತ ದಳ ಹಾಗೂ 2,373 ವಿಶೇಷ ಜಾಗೃತದಳ ನಿಯೋಜನೆ ಮಾಡಲಾಗುತ್ತದೆ.

ಭದ್ರತಾ ಕ್ರಮಗಳು: ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್ ಆಗಲಿವೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ. 

ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗುವಂತಿಲ್ಲ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ, ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್‌ಫೋನ್ ಬಳಕೆಗೆ ಅನುಮತಿ ನೀಡಲಾಗಿದೆ. 

ಮಕ್ಕಳ ಅನುಕೂಲಕ್ಕಾಗಿ ಮಲ್ಟಿಪಲ್ ಚಾಯ್ಸ್: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬಾರಿ 20 ಅಂಕಗಳ ಬಹುಆಯ್ಕೆ ಪ್ರಶ್ನೆಗಳು ಇರಲಿವೆ. ಈ ಹಿಂದೆ 5 ಅಥವಾ 6 ಬಹು ಆಯ್ಕೆಯ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಈ ಬಾರಿ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರಲಿದೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಗ್ರೇಸ್ ಮಾರ್ಕ್ಸ್​​ಗೆ ಸಂಬಂಧಿಸಿಯೂ ತಿದ್ದುಪಡಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದರು. ಅಲ್ಲದೆ, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳ ವಾರ್ಷಿಕ ಬಸ್ ಪಾಸ್ ಅವಧಿ ಮುಕ್ತಾಯವಾಗಿದ್ದರೂ ಕೂಡ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. 

LEAVE A REPLY

Please enter your comment!
Please enter your name here