Home Uncategorized ಇಂದು, ನಾಳೆ ಮಹತ್ವದ ಸಭೆ ಕರೆದ ರಾಜ್ಯ ಸರ್ಕಾರ; ಬರ, ಪ್ರಮುಖ ಅಭಿವೃದ್ಧಿ ವಿಚಾರಗಳ ಕುರಿತು...

ಇಂದು, ನಾಳೆ ಮಹತ್ವದ ಸಭೆ ಕರೆದ ರಾಜ್ಯ ಸರ್ಕಾರ; ಬರ, ಪ್ರಮುಖ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

5
0
Advertisement
bengaluru

ರಾಜ್ಯ ಸರ್ಕಾರ ಮಂಗಳವಾರ ಮತ್ತು ಬುಧವಾರದಂದು ಮಹತ್ವದ ಸಭೆಯನ್ನು ಕರೆದಿದ್ದು, ರಾಜ್ಯಕ್ಕೆ ಸವಾಲಾಗಿರುವ ಪ್ರಮುಖ ಸಮಸ್ಯೆಗಳನ್ನು, ವಿಶೇಷವಾಗಿ ಬರ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲಿದೆ. ಬೆಂಗಳೂರು: ರಾಜ್ಯ ಸರ್ಕಾರ ಮಂಗಳವಾರ ಮತ್ತು ಬುಧವಾರದಂದು ಮಹತ್ವದ ಸಭೆಯನ್ನು ಕರೆದಿದ್ದು, ರಾಜ್ಯಕ್ಕೆ ಸವಾಲಾಗಿರುವ ಪ್ರಮುಖ ಸಮಸ್ಯೆಗಳನ್ನು, ವಿಶೇಷವಾಗಿ ಬರ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

‘ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.

ಬರಗಾಲಕ್ಕೆ ಸಂಬಂಧಿಸಿದಂತೆ, ಈ ತಿಂಗಳು ಕೆಲವು ಪ್ರದೇಶಗಳಲ್ಲಿ ಮಳೆಯಾಗಿರುವುದರಿಂದ ಅಂತಿಮ ಚಿತ್ರಣ ಸ್ಪಷ್ಟವಾಗುವುದಕ್ಕೆ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಯಬೇಕೆಂದು ಕೆಲವು ತಜ್ಞರು ಸೂಚಿಸಿದ್ದಾರೆ. ರೈತ ಸಮುದಾಯಕ್ಕೆ ಲಾಭವಾಗಬೇಕಾದರೆ ನಿಯಮಾವಳಿಗಳನ್ನು ಸಡಿಲಿಸಬೇಕಾಗಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ರಾಜ್ಯದ ಮೇಲೆ ಬರದ ಛಾಯೆ: ಸರ್ಕಾರದಿಂದ ಸರಣಿ ಸಭೆ, 130 ತಾಲೂಕುಗಳು ಬರಪೀಡಿತವೆಂದು ಘೋಷಣೆ ಸಾಧ್ಯತೆ

bengaluru bengaluru

ಸೆಪ್ಟೆಂಬರ್ 15 ರಂದು ಗೃಹ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸರ್ಕಾರ ಗಮನ ಹರಿಸಲಿದ್ದು, ರಾಜ್ಯದಾದ್ಯಂತ ಪೊಲೀಸ್ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿದೆ.


bengaluru

LEAVE A REPLY

Please enter your comment!
Please enter your name here