Home Uncategorized ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಡಾ.ಶಿವಣ್ಣ

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಡಾ.ಶಿವಣ್ಣ

23
0

ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿದೆ ಗಣರಾಜ್ಯೋತ್ಸವವನ್ನು ಆಚರಿಸಲಾಗಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿದೆ ಗಣರಾಜ್ಯೋತ್ಸವವನ್ನು ಆಚರಿಸಲಾಗಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ಬಳಿಕ ಈದ್ಗಾ ಮೈದಾನದಲ್ಲಿ ರಾಷ್ಟಗೀತೆ ಹಾಗೂ ನಾಡಗೀತೆಯೂ ಮೊಳಗಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಚಾಮರಾಜಪೇಟೆ ನಾಗರೀಕರು ಭಾರತ ಮಾತೆಗೆ ಜೈಕಾರ ಹಾಕಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದರು.

ಸಂಸದ ಪಿ.ಸಿ.ಮೋಹನ್​​​, ಶಾಸಕ ಜಮೀರ್​ ಅಹ್ಮದ್ ಖಾನ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಬೆಂಗಳೂರು ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ನಡೆದಿದೆ.

ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮೈದಾನದ ಸುತ್ತ ಬ್ಯಾರಿಕೇಡ್ ಅಳವಡಿಸಲಾಗಿದೆ.

ಮೈದಾನ ಸುತ್ತ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮೈದಾನದ ಸುತ್ತ 50 ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.

ಮೈದಾನದ ಸುತ್ತ ಮುತ್ತಲಿನ ಬೃಹತ್ ಕಟ್ಟಡ ಮೇಲೆ ವಾಚರ್ ಗಳ  ನೇಮಕ ಮಾಡಲಾಗಿದ್ದು, 4 ಎಸಿಪಿ, 10 ಇನ್ಸ್ಪೆಕ್ಟರ್, 40 ಸಬ್ ಇನ್ಸ್ಪೆಕ್ಟರ್,300 ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ 6 ಕೆಎಸ್ ಆರ್ ತುಕಡಿಗಳನ್ನ ಭಧ್ರತೆಗೆ ನಿಯೋಜನೆ ಮಾಡಲಾಗಿದೆ

LEAVE A REPLY

Please enter your comment!
Please enter your name here