Home ಸಿನಿಮಾ ‘ಇಬ್ಬರ ನಡುವಿನ ಮುದ್ದಿನ ರಾಣಿ’ ಚಿತ್ರಕ್ಕೆ ಚಾಲನೆ

‘ಇಬ್ಬರ ನಡುವಿನ ಮುದ್ದಿನ ರಾಣಿ’ ಚಿತ್ರಕ್ಕೆ ಚಾಲನೆ

63
0
Advertisement
bengaluru

ಬೆಂಗಳೂರು:

ಚಂದನವನದಲ್ಲಿ ಕೆಲವು ದಿನಗಳಿಂದ ನೂತನ ಚಿತ್ರಗಳು ಆರಂಭವಾಗುತ್ತಿದೆ.‌ ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ‌ ಮುದ್ದಿನ ರಾಣಿ’.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ದೊಡ್ಡಬಳ್ಳಾಪುರ ಬಳಿಯಿರುವ ಅಂಗಾಸನ ರೆಸಾರ್ಟ್ ನಲ್ಲಿ ನೆರವೇರಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ವೈಎಸ್‍ಆರ್ಪಿ ಸ್ಟೇಟ್ ಜಾಯಿಂಟ್ ಸೆಕ್ರೆಟರಿ ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ‌ನೀಡಿದ್ದಾರೆ.

bengaluru bengaluru

ಕನ್ನಡ ‌ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ.ಆರ್ ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ‌‌ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ 15 ‌ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು‌ ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನಾ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


bengaluru

LEAVE A REPLY

Please enter your comment!
Please enter your name here