Home Uncategorized ಇವಿ ಬ್ಯಾಟರಿ ಉತ್ಪಾದನೆ: ಐಬಿಸಿ ಜತೆ ರಾಜ್ಯ ಸರ್ಕಾರ ಒಡಂಬಡಿಕೆ; 8 ಸಾವಿರ ಕೋಟಿ ರೂ....

ಇವಿ ಬ್ಯಾಟರಿ ಉತ್ಪಾದನೆ: ಐಬಿಸಿ ಜತೆ ರಾಜ್ಯ ಸರ್ಕಾರ ಒಡಂಬಡಿಕೆ; 8 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು

25
0

ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ(ಐಬಿಸಿ) ಜೊತೆ ರಾಜ್ಯ ಸರ್ಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ… ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ(ಐಬಿಸಿ) ಜೊತೆ ರಾಜ್ಯ ಸರ್ಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ ಸಹಿ ಹಾಕಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಸಮ್ಮುಖದಲ್ಲಿ ಇಂದು ಐಬಿಸಿ ಜತೆ ಒಡಂಬಡಿಕೆಗೆ ಸಹಿ ಹಾಕಿದ್ದು, ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಸರ್ಕಾರ ಪಾಟೀಲ್ ಅವರು ಈ ಖಾತೆಯ ಹೊಣೆ ವಹಿಸಿಕೊಂಡ ಮೇಲೆ ಬಂಡವಾಳ ಆಕರ್ಷಣೆಯಲ್ಲಿ ಇದೊಂದು ಮೈಲಿಗಲ್ಲಾಗಿದೆ.

ಇದನ್ನು ಓದಿ: ರಾಜ್ಯದಲ್ಲಿ ಹೂಡಿಕೆ ಕುರಿತು ಫಾಕ್ಸ್‌ಕಾನ್ ಜೊತೆಗೆ ಕರ್ನಾಟಕ ಸರ್ಕಾರ ನಡೆಸಿದ ಚರ್ಚೆ ‘ಫಲಪ್ರದ’: ಸಚಿವ ಎಂಬಿ ಪಾಟೀಲ್​

ಈ ಒಡಂಬಡಿಕೆಗೆ ರಾಜ್ಯ ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದರು. 

ಮರುಬಳಕೆಗೆ ಬರುವಂಥ ಲಿಥಿಯಾನ್‌ ಬ್ಯಾಟರಿಗಳ ಉತ್ಪಾದನೆಯನ್ನು ಈ ಕಂಪನಿಯು ಇನ್ನು ಒಂದು ವರ್ಷದಲ್ಲಿ ರಾಜ್ಯದಲ್ಲಿ ಪ್ರಾರಂಭಿಸಲಿದೆ. ಈ ಉದ್ದೇಶಕ್ಕಾಗಿ ಕಂಪನಿಯ ಕೋರಿಕೆಯಂತೆ ಬೆಂಗಳೂರು ಗ್ರಾಮಾಂತರ ವಲಯದಲ್ಲಿ 100 ಎಕರೆ ಜಮೀನು ನೀಡಲಿದೆ. 

ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಂಪನಿಯೊಂದಿಗೆ ಮೂರು ಸುತ್ತು ಮಾತುಕತೆ ನಡೆಸಿ, ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಮನದಟ್ಟು ಮಾಡಿಕೊಡಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.

ಈ ಕಂಪನಿಯು ಇಂತಹ ಬ್ಯಾಟರಿಗಳನ್ನು ದಕ್ಷಿಣ ಕೊರಿಯಾದಲ್ಲಿ ಪರೀಕ್ಷಾರ್ಥವಾಗಿ ತಯಾರಿಸುವ ಘಟಕವನ್ನು ಹೊಂದಿದ್ದು, ಅದು ಕೂಡ ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ. ಅತ್ಯುತ್ತಮ ಬ್ಯಾಟರಿಗಳ ಉತ್ಪಾದನೆಗೆ ಡ್ರೈರೂಮ್‌ ಮತ್ತು ಕ್ಲೀನ್‌ ರೂಮ್‌ಗಳನ್ನು ಕಂಪನಿ ಸ್ಥಾಪಿಸಲಿದೆ. ಇದು ರಾಜ್ಯದಲ್ಲಿ ಇಂತಹ ಎರಡನೇ ಘಟಕವಾಗಿದ್ದು, ಈ ಕ್ಷೇತ್ರದಲ್ಲಿ ರಾಜ್ಯವು ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ ಎಂದು ಅವರು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ, ಐಬಿಸಿ ಸಂಸ್ಥಾಪಕ ಮತ್ತು ಸಿಇಒ ಡಾ.ಪ್ರಿಯದರ್ಶಿ ಪಾಂಡಾ, ಕಂಪನಿಯ ಸಿಒಒ ಶಶಿ ಕುಪ್ಪಣ್ಣಗಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here