Home Uncategorized ಇ–ವಿಧಾನಮಂಡಲ ಯೋಜನೆ: ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ಇ–ವಿಧಾನಮಂಡಲ ಯೋಜನೆ: ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

23
0

ಇ-ಆಡಳಿತ ಯೋಜನೆಯನ್ನು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (ನೇವಾ) ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಎಂಎಲ್‌ಸಿ ಮತ್ತು ವಕೀಲ ರಮೇಶ್ ಬಾಬು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು: ಇ-ಆಡಳಿತ ಯೋಜನೆಯನ್ನು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (ನೇವಾ) ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಎಂಎಲ್‌ಸಿ ಮತ್ತು ವಕೀಲ ರಮೇಶ್ ಬಾಬು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಕಾಂಗ್ರೆಸ್‌ ಮುಖಂಡರೂ ಆದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭೆ ಮತ್ತು ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.‌

‘ಇ-ವಿಧಾನ ಮಂಡಲ ಯೋಜನೆ ಜಾರಿಗೆ 2016-17ರಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ರೂ.60.84 ಕೋಟಿ ಅಂದಾಜಿಸಿತ್ತು. ಆದರೆ, ಕರ್ನಾಟಕ ವಿಧಾನ ಮಂಡಲವು ಈ ಯೋಜನೆ ಜಾರಿಗೆ ಕಿಯೋನಿಕ್ಸ್ ಸಂಸ್ಥೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿತ್ತು. ಇದರನ್ವಯ ಕಿಯೋನಿಕ್ಸ್‌, ಯೋಜನೆಗೆ ಸುಮಾರು ರೂ.254 ಕೋಟಿ ಮೊತ್ತ ತಗಲುವುದಾಗಿ ವರದಿ ನೀಡಿತ್ತು.

‘ಕಿಯೋನಿಕ್ಸ್ ಮೂಲಕ ಯೋಜನೆ ಜಾರಿ ಮಾಡಿದರೆ ರಾಜ್ಯದ ಬೊಕ್ಕಸಕ್ಕೆ ರೂ.254 ಕೋಟಿ ನಷ್ಟವಾಗಲಿದೆ. ಈ ಕುರಿತಂತೆ ಮಧ್ಯಪ್ರವೇಶಿಸಿ ಎಂದು ವಿಧಾನಸಭಾಧ್ಯಕ್ಷರಿಗೆ ಮನವಿ ಮಾಡಲಾಗಿತ್ತು. ಆದರೆ, ವಿಧಾನಸಭಾಧ್ಯಕ್ಷರು ಈ ಕುರಿತು ಗಮನ ಹರಿಸಿಲ್ಲ‘ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ಕಿಯೋನಿಕ್ಸ್ ಮೂಲಕ ರೂ.254 ಕೋಟಿ ವೆಚ್ಚದಲ್ಲಿ ಇ-ವಿಧಾನ ಮಂಡಲ ಯೋಜನೆ ಜಾರಿ ಮಾಡುವುದಕ್ಕೆ ಬದಲಾಗಿ ‘ನೇವಾ’ ಮೂಲಕ ಜಾರಿಗೊಳಿಸಲು ಆದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here