Home Uncategorized ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: 'ಕೈ' ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ...

ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: 'ಕೈ' ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತರಾಟೆ

9
0
bengaluru

ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿ: ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಮಿಥುನ್ ರೈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಕಾಂಗ್ರೆಸ್ ಮುಖಂಡರೇ ಮಿಥುನ್ ರೈಗೆ ಬುದ್ಧಿವಾದ ಹೇಳಿದ್ದರು. ಇದೀಗ ರಕ್ಷಿತ್ ಶೆಟ್ಟಿ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. 

ಇದನ್ನೂ ಓದಿ: ಉಡುಪಿ ಕೃಷ್ಣ ಮಠಕ್ಕೆ ಭೂಮಿ ಕೊಟ್ಟಿದ್ದು ಮುಸಲ್ಮಾನ: ಕಾಂಗ್ರೆಸ್ ಮುಖಂಡನ ಹೇಳಿಕೆ ವಿವಾದಕ್ಕೆ ಎಡೆ

ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ. 

bengaluru

The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023

ಉಡುಪಿ ಮಠಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಮಾಡಿರುವ ಟ್ವೀಟ್ ಗೆ ಹಲವರು ಟ್ವೀಟ್ ಮಾಡಿ ಬೆಂಬಲ ಸೂಚಿಸುತ್ತಿದ್ದಾರೆ.

bengaluru

LEAVE A REPLY

Please enter your comment!
Please enter your name here