ಜುಲೈ 31ರಂದು ಉಡುಪಿ ಜಿಲ್ಲೆಯ ಬೈಂದೂರು ಕರಾವಳಿಯಲ್ಲಿ ದೋಣಿಯೊಂದು ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ. ಮಂಗಳೂರು: ಜುಲೈ 31ರಂದು ಉಡುಪಿ ಜಿಲ್ಲೆಯ ಬೈಂದೂರು ಕರಾವಳಿಯಲ್ಲಿ ದೋಣಿಯೊಂದು ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.
ಸತೀಶ್ ಖಾರ್ವಿ ಎಂಬುವವರ ಮೃತದೇಹ ಮಂಗಳವಾರ ರಾತ್ರಿ ಉಪ್ಪುಂದ ಸಮೀಪದ ಕೊಡೇರಿ ಬಂದರಿನ ಸೀವಾಕ್ ಬಳಿ ತೇಲುತ್ತಿತ್ತು.
ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ಶವವನ್ನು ಹೊರತೆಗೆದಿದ್ದಾರೆ.
ಸೋಮವಾರ ಸಂಜೆಯಿಂದಲೇ ಮೀನುಗಾರನಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಸೋಮವಾರ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಬಳಿ ಮೀನುಗಾರಿಕೆ ಮುಗಿಸಿ ಮರಳುತ್ತಿದ್ದ ವೇಳೆ ದೋಣಿ ಮಗುಚಿ ಬಿದ್ದಿತ್ತು. ಸೋಮವಾರ ರಕ್ಷಿಸಲ್ಪಟ್ಟ ಮತ್ತೊಬ್ಬ ವ್ಯಕ್ತಿ ನಾಗೇಶ ಖಾರ್ವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೀನುಗಾರಿಕೆ ಮತ್ತು ಬಂದರು ಖಾತೆ ರಾಜ್ಯ ಸಚಿವ ಮಂಕಾಳ ವೈದ್ಯ ಅವರು, ಮಂಗಳವಾರ ದೋಣಿ ದುರಂತದಲ್ಲಿ ಮೃತಪಟ್ಟ ಇಬ್ಬರು ಮೀನುಗಾರರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಘೋಷಿಸಿದರು.