Home Uncategorized ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಡಿಕ್ಕಿ: 3 ಸಾವು, ಇಬ್ಬರಿಗೆ ಗಂಭೀರ ಗಾಯ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಡಿಕ್ಕಿ: 3 ಸಾವು, ಇಬ್ಬರಿಗೆ ಗಂಭೀರ ಗಾಯ

0
0
bengaluru

ದೆಹಲಿ: ಉತ್ತರ ಪ್ರದೇಶದ (Uttar Pradesh) ನೋಯ್ಡಾದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ (Greater Noida Expressway) ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ(Road Accident) ಮೂವರು ಸಾವಿಗೀಡಾಗಿದ್ದು , ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನೋಯ್ಡಾದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಡಿಕ್ಕಿ ಹೊಡೆದವು. ಮೂವರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಗ್ರೇಟರ್ ನೋಯ್ಡಾ ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

bengaluru

LEAVE A REPLY

Please enter your comment!
Please enter your name here