ಬೆಂಗಳೂರು:
ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ 24 ಗಂಟೆಯಲ್ಲಿ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆದು ಅದನ್ನು ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಪ್ರಚಾರಕ್ಕೆ ಹೋಗಬಾರದು ಎಂದುಕೊಂಡಿದ್ದೇನೆ ಆದರೆ ಸಿದ್ದರಾಮಯ್ಯ, ದೇವೇಗೌಡರು, ಕುಮಾರಸ್ವಾಮಿ ಪ್ರಚಾರ ಮಾಡುತ್ತಿರುವಾಗ ಮುಖ್ಯಮಂತ್ರಿಯಾಗಿ ತಾವು ಹೋಗದಿದ್ದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಇಂದು ಶಿರಾ ಮತ್ತು ನಾಳೆ ಆರ್ ಆರ್ ನಗರದಲ್ಲಿ ಪ್ರಚಾರ ಮಾಡುತ್ತೇನೆ ಎಂದರು.
ಉಪ ಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ಗಳಿಸುತ್ತದೆ. ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ. ಫಲಿತಾಂಶ ಬಂದ ನಂತರ ಅವರೇ ಉತ್ತರ ನೀಡಲಿ ಎಂದು ಯಡಿಯೂರಪ್ಪ ಹೇಳಿದರು.