Home Uncategorized ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಕಾಂಗ್ರೆಸ್ ಪ್ರಯತ್ನ ಎಂದ ಸುನಿಲ್ ಕುಮಾರ್, ಸಿದ್ದರಾಮಯ್ಯ ತಿರುಗೇಟು

ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಕಾಂಗ್ರೆಸ್ ಪ್ರಯತ್ನ ಎಂದ ಸುನಿಲ್ ಕುಮಾರ್, ಸಿದ್ದರಾಮಯ್ಯ ತಿರುಗೇಟು

19
0
Advertisement
bengaluru

ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡುತ್ತಿದೆ. ಈ ಮೂಲಕ ವಿದ್ಯುತ್ ಸರಬರಾಜು ಕಂಪನಿಗಳನ್ನು (ಎಸ್ಕಾಂ) ಖಾಸಗೀಕರಣಗೊಳಿಸುವುದು ಕಾಂಗ್ರೆಸ್‌ನ ಗುರಿಯಾಗಿದೆ ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಶುಕ್ರವಾರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ತಿರುಗೇ ಬೆಂಗಳೂರು: ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡುತ್ತಿದೆ. ಈ ಮೂಲಕ ವಿದ್ಯುತ್ ಸರಬರಾಜು ಕಂಪನಿಗಳನ್ನು (ಎಸ್ಕಾಂ) ಖಾಸಗೀಕರಣಗೊಳಿಸುವುದು ಕಾಂಗ್ರೆಸ್‌ನ ಗುರಿಯಾಗಿದೆ ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಶುಕ್ರವಾರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹೊತ್ತಿಗೆ ಹಿಂದಿನ ಸರ್ಕಾರ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲದ ಗಂಟನ್ನು ಹೊರಿಸಿ ಹೋಗಿತ್ತು. ಸಾಲ ಮಾಡಿ ಈ ಎಸ್ಕಾಂಗಳ ಬಾಕಿ ಮೊತ್ತ ತೀರಿಸಿ, ಕುತ್ತಿಗೆವರೆಗೂ ಮುಳುಗಿದ್ದ ಎಸ್ಕಾಂಗಳನ್ನು ಮೇಲೆತ್ತಿದವರು ನಾವು ಎಂದಿದ್ದಾರೆ.

ಮುಂದುವರಿದು, ಅಗತ್ಯ ಇರುವ ಕ್ಷೇತ್ರಕ್ಕೆ ಹಣ ಹಾಕುವುದನ್ನು ನಷ್ಟ ಎನ್ನುವುದಿಲ್ಲ, ಬದಲಾಗಿ ಬಂಡವಾಳ ಹೂಡಿಕೆ ಎನ್ನುತ್ತಾರೆ ಎಂಬ ಅರ್ಥ ಶಾಸ್ತ್ರದ ಸರಳ ತತ್ವದ ಅರಿವಿಲ್ಲದ ಸುನಿಲ್ ಕುಮಾರ್ ಅವರ ಜ್ಞಾನಭಂಡಾರದ ಬಗ್ಗೆ ಅನುಕಂಪವಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2014-15 ರಲ್ಲಿ ರಾಜ್ಯದಲ್ಲಿ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ 14,825 ಮೆ.ವ್ಯಾ ಮಾತ್ರ. ಅದರಲ್ಲಿ ಸೋಲಾರ್ ಮೂಲದಿಂದ 118 ಮೆ.ವ್ಯಾ ಮತ್ತು ಗಾಳಿ ಮೂಲದಿಂದ 2655 ಮೆ. ವ್ಯಾ ವಿದ್ಯುತ್ ಉತ್ಪಾದನೆ ಆಗುತ್ತಿತ್ತು ಎಂದು ತಿಳಿಸಿದ್ದಾರೆ.

‘2013ಕ್ಕಿಂತ ಮೊದಲು ಬಿಎಸ್ ಯಡಿಯೂರಪ್ಪ ಸರ್ಕಾರ ಎಸ್ಕಾಂಗಳನ್ನು ನಷ್ಟಕ್ಕೆ ತಳ್ಳಿದೆ. ಎಸ್ಕಾಂಗಳನ್ನು ಉಳಿಸಿದ್ದು ಕಾಂಗ್ರೆಸ್ ಸರ್ಕಾರ. ನಾವು ಹೂಡಿಕೆ ಮಾಡಿದ್ದೇವೆ ಮತ್ತು ಅನಗತ್ಯವಾಗಿ ಖರ್ಚು ಮಾಡಿಲ್ಲ. 2013 ರಿಂದ 2018 ರವರೆಗೆ ನಮ್ಮ ಸರ್ಕಾರವು ಹೆಚ್ಚಿನ ವಿದ್ಯುತ್ ಉತ್ಪಾದಿಸುವ ನಿಟ್ಟಿನಲ್ಲಿ ಕೆಲಸ ಮಾಡಿದೆ. ನಾವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಮತ್ತು ಜನರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಅವರು ಹೇಳಿದರು.

bengaluru bengaluru

2018 ರ ವೇಳೆಗೆ ಸೋಲಾರ್ ಮೂಲದಿಂದ 6157 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 4730 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿ ತುಂಬಿದವರು ನಾವು. ವಿದ್ಯುತ್ ಉತ್ಪಾದನೆ ಹೆಚ್ಚಾದರೆ ಇಲಾಖೆಗೆ ಲಾಭವಾಗುತ್ತಾ? ನಷ್ಟವಾಗುತ್ತಾ ಸುನಿಲ್ ಕುಮಾರ್ ಅವರೇ?. ಕಲ್ಲಿದ್ದಲು ಮೂಲದ ಉಷ್ಣ ವಿದ್ಯುತ್ ಉತ್ಪಾದನೆ 2014-15 ರಲ್ಲಿ 6,197 ಮೆಗಾವ್ಯಾಟ್ ಇದ್ದದ್ದು, 2018 ರ ವೇಳೆಗೆ 11,366 ಮೆಗಾವ್ಯಾಟ್ ಗೆ ತಲುಪಿತ್ತು. ಸುನಿಲ್ ಕುಮಾರ್ ಅವರೇ, ಇಂದು ನೀವು ವಿದ್ಯುತ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರೆ ಅದರ ಹಿಂದಿರುವುದು ನಮ್ಮ ಸರ್ಕಾರದ ಶ್ರಮ ಎಂದು ಕಿಡಿಕಾರಿದ್ದಾರೆ.

ಸುನಿಲ್ ಕುಮಾರ್ ಹೇಳಿದ್ದಿಷ್ಟು…

ಸುನಿಲ್ ಕುಮಾರ್ ಅವರ ಕಚೇರಿಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಸ್ಕಾಂಗಳನ್ನು ದಿವಾಳಿಯತ್ತ ತಳ್ಳಿದರು ಮತ್ತು ಎಸ್ಕಾಂಗಳು 9,000 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದವು ಎಂದು ಆರೋಪಿಸಿದ್ದಾರೆ.

ಈಗ ಅವರ ಚುನಾವಣಾ ಭರವಸೆಯು ವಿದ್ಯುತ್ ಕಂಪನಿಗಳಿಗೆ ಹೊರೆಯಾಗಲಿದೆ. ಮತಕ್ಕಾಗಿ ಕಾಂಗ್ರೆಸ್ ಎಸ್ಕಾಂಗಳನ್ನು ಮಾರಾಟ ಮಾಡಬಾರದು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡುವಲ್ಲಿ ವಿಫಲವಾಗಿದೆ. ಈಗ ಅದೇ ಪಕ್ಷ ಉಚಿತ ವಿದ್ಯುತ್ ಭರವಸೆ ನೀಡುತ್ತಿದೆ… ಇದು ಶತಮಾನದ ದೊಡ್ಡ ಸುಳ್ಳು. ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಎಲ್ಲ ಎಸ್ಕಾಂಗಳಿಗೆ ಸರ್ಕಾರ 18 ಸಾವಿರ ಕೋಟಿ ರೂ. ಪಾವತಿಸಿದೆ ಎಂದು ಸಚಿವರು ಆರೋಪಿಸಿದರು.


bengaluru

LEAVE A REPLY

Please enter your comment!
Please enter your name here