Home Uncategorized ಎಸ್.ಎಂ. ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಹಿರಿಯ ರಾಜಕಾರಣಿ ಟಿ. ಜಾನ್ ವಿಧಿವಶ​

ಎಸ್.ಎಂ. ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಹಿರಿಯ ರಾಜಕಾರಣಿ ಟಿ. ಜಾನ್ ವಿಧಿವಶ​

10
0
bengaluru

ಹಿರಿಯ ರಾಜಕಾರಣಿ, ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದ ಟಿ. ಜಾನ್ ಬೆಂಗಳೂರಿನ ಸ್ವನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರು: ಹಿರಿಯ ರಾಜಕಾರಣಿ, ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದ ಟಿ. ಜಾನ್ ಬೆಂಗಳೂರಿನ ಸ್ವನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

 ಮಾಜಿ ಸಚಿವ ಟಿ.ಜಾನ್​ ಅವರು ಬೆಂಗಳೂರಿನಲ್ಲಿಂದ ಕೊನೆಯುಸಿರೆಳೆದರು. ಜಾನ್​ ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್‌ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಮಾಡಿದ್ದರು.

ಮೂಲತಃ ಕೇರಳದವರಾದ ಟಿ.ಜಾನ್, ಕೊಡಗಿಗೆ ಬಂದು ಸಾಕಷ್ಟು ಕಷ್ಟಪಟ್ಟುರು. ಛಲದಿಂದ ಉದ್ಯಮದಲ್ಲಿ ತೊಡಗಿಕೊಂಢೂ ಹಂತ ಹಂತವಾಗಿ ಸಿರಿವಂತಿಕೆ ಪಡೆದುಕೊಂಡಿದ್ದರು. ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು.  ಕಷ್ಟ ಹೇಳಿಕೊಂಡು ಯಾರೇ ಬಂದರು ಸಹಾಯಹಸ್ತ ಚಾಚುತ್ತಿದ್ದ ಟಿ.ಜಾನ್ ಅವರು ಕೊಡುಗೈ ದಾನಿಯೆಂದೇ ಖ್ಯಾತರಾಗಿದ್ದರು. ನಾಳೆ ಶನಿವಾರ  ಬೆಂಗಳೂರಿನಲ್ಲಿ ಟಿ.ಜಾನ್ ಅವರ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here