Home Uncategorized ಎಸ್ ಸಿಪಿ/ಟಿಎಸ್ ಪಿ ನಿಧಿಗಳ ಬಳಕೆ ಕುರಿತು ಹಿಂದುಳಿದ ವರ್ಗಗಳ ಇಲಾಖೆ ಸಚಿವರುಗಳೊಂದಿಗೆ ಸಿಎಂ ಸಭೆ

ಎಸ್ ಸಿಪಿ/ಟಿಎಸ್ ಪಿ ನಿಧಿಗಳ ಬಳಕೆ ಕುರಿತು ಹಿಂದುಳಿದ ವರ್ಗಗಳ ಇಲಾಖೆ ಸಚಿವರುಗಳೊಂದಿಗೆ ಸಿಎಂ ಸಭೆ

18
0

ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪ ಯೋಜನೆ (TSP) ನಿಧಿಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸೇರಿದ ತಮ್ಮ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಬೆಂಗಳೂರು: ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪ ಯೋಜನೆ (TSP) ನಿಧಿಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸೇರಿದ ತಮ್ಮ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ನಿಧಿಯ ಬಳಕೆಯನ್ನು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (Planning, Allocation and Utilisation of Financial Resources)) ಕಾಯಿದೆ 2013 ರ ಸೆಕ್ಷನ್ 7 (ಡಿ) ನ್ನು ತೆಗೆದುಹಾಕುವುದಾಗಿ ಸಿಎಂ ತಮ್ಮ ಬಜೆಟ್‌ನಲ್ಲಿ ಭರವಸೆ ನೀಡಿದ್ದರು. ಪ್ರತ್ಯೇಕವಾಗಿ ಸಮುದಾಯಗಳಿಗೆ ಮತ್ತು ಇತರ ಅಭಿವೃದ್ಧಿ ಕಾರ್ಯಗಳಿಗೆ ನೀಡುವುದಿಲ್ಲ. 

ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ನಡೆಯಲಿರುವ ಸಭೆಗೆ ಹಾಜರಾಗದಿರುವ ಕಾರಣ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚೆನ್ನೈಗೆ ಐಫೋನ್ ತಯಾರಿಕಾ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿವೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here