ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದರು. ಬೆಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದರು.
ಸ್ವಾತಂತ್ರ್ಯ ಹೋರಾಟಗಾರರಾದ ಬಸವನಗುಡಿಯ ಸಾಯಿ ವೃದ್ಧಾಶ್ರಮದಲ್ಲಿ ವಾಸವಿರುವ ಶಕುಂತಲಾ, ಯಲಚೇನಹಳ್ಳಿಯ ನಂಜಪ್ಪ ಲೇ ಔಟ್ ನಿವಾಸಿ ಎಸ್.ವಿ.ಟಿ.ಗುಪ್ತಾ, ಬನಶಂಕರಿ 3ನೇ ಹಂತದ ಶಂಕರನಾರಾಯಣರಾವ್, ಮಲ್ಲೇಶ್ವರದ ನಾಗಭೂಷಣ್ ರಾವ್ ಮತ್ತು ಭೂಪಸಂದ್ರದ ವಿನಾಯಕ ಲೇಔಟ್’ನ ಕೆ.ಸಿ.ನಾರಾಯಣಪ್ಪ ಅವರ ಮನೆಗಳಿಗೆ ಭೇಟಿ ನೀಡಿದ ರಾಜ್ಯಪಾಲರು ಭೇಟಿ ನೀಡಿದರು. ಆನಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಹಿ ತಿನಿಸಿ ಪ್ರಮಾಣಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.
ಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿ ತಲೆಬಾಗಿ ನಮಿಸಿದರು.