Home Uncategorized ''ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೆ ಚಿಂತನೆ: ಸಚಿವ ಬಿ.ನಾಗೇಂದ್ರ

''ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೆ ಚಿಂತನೆ: ಸಚಿವ ಬಿ.ನಾಗೇಂದ್ರ

13
0
Advertisement
bengaluru

“ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ,ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ  “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ,ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರೀಡೆಗಳು ಹೆಸರುವಾಸಿ. ವಿಜಯನಗರದಲ್ಲಿ ಕುಸ್ತಿ,ವಿಜಯಪುರದಲ್ಲಿ ಸೈಕ್ಲಿಂಗ್ ನಂತೆ ಎಲ್ಲ ಜಿಲ್ಲೆಗಳಲ್ಲಿಯೂ ಒಂದೊಂದು ಕ್ರೀಡೆಗಳು ಹೆಸರುವಾಸಿಯಾಗಿದ್ದು, ಆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಹೋಬಳಿಮಟ್ಟದಿಂದ ಜಿಲ್ಲಾಮಟ್ಟದವರೆಗೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ ಸನ್ನದ್ಧಗೊಳಿಸಲಾಗುವುದು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿಯೇ ಅತ್ಯುತ್ತಮವಾದ ಬಜೆಟ್ ಮಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 5ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಸಿಎಂ ಅವರು ಒದಗಿಸಿದ್ದು, ಸದರಿ ಅನುದಾನದ ಸದ್ಭಳಕೆ ಮಾಡಿಕೊಂಡು ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ 2013ರಿಂದ ಇಲ್ಲಿಯವರೆಗೆ ಸಾವಿರಾರು ಕೋಟಿ ರೂ.ಗಳು ಖರ್ಚು ಮಾಡಲಾಗಿದ್ದು,ಸರಕಾರದ ಪ್ರಯೋಜನ ಪಡೆದುಕೊಂಡಿರುವ ಪರಿಶಿಷ್ಟ ಪಂಗಡದ ಫಲಾನುಭವಿಗಳ ಜೀವನಮಟ್ಟದಲ್ಲಿ ಸುಧಾರಣೆಯಾಗಿದೆಯೇ ಎಂಬುದರ ಕುರಿತು ಇಲಾಖೆಯಿಂದ ಮೌಲ್ಯಮಾಪನ ನಡೆಸಲಾಗುವುದು ಎಂದು ಅವರು ಹೇಳಿದರು.

bengaluru bengaluru

ಬಜೆಟ್ ನಲ್ಲಿ  ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕೆ 1588.23 ಕೋಟಿ ರೂ.ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1588.23ಕೋಟಿ ರೂ.ಗಳನ್ನು ಒದಗಿಸಿದ್ದಾರೆ 
ಈಗ ನೀಡಲಾಗಿರುವ ಬಜೆಟ್ ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ಮೀಸಲಿಡಲಾಗುತ್ತಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ವಾಸ ಮಾಡುತ್ತಿರುವ 11 ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು 6 ತಿಂಗಳ ಬದಲು 12 ತಿಂಗಳಿಗೆ ವಿಸ್ತರಿಸಿ 50 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ ಎಂದರು.
 


bengaluru

LEAVE A REPLY

Please enter your comment!
Please enter your name here