Home Uncategorized ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

23
0

ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸಲ್ಲ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು: ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸಲ್ಲ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿಯನ್ನು ಉಪ ಸಮಿತಿ ಮೂಲಕ   ಅನುಷ್ಠಾನಗೊಳಿಸಿದ್ದೇವೆ. ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದುಹಾಕಬಹುದು ಎಂಬ ಆತಂಕ ಅವರಲ್ಲಿತ್ತು, ಆದರೆ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯ ಎಸ್‌ಸಿ ಸಮುದಾಯದಲ್ಲೇ ಉಳಿಯುವಂತೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇನೆ ಎಂದರು. 

I appeal to Banjara community leaders, we have not implemented Sadashiva commission report. We have implemented it through the subcommittee. They were worried that they could be removed from the SC list, but I recommended that Banjara, Bhovi, Koracha, Korama community will remain… pic.twitter.com/KKPPx7Xe42
— ANI (@ANI) March 27, 2023

ಇದನ್ನೂ ಓದಿ: ಸರ್ಕಾರದ ಒಳಮೀಸಲಾತಿ ನಿರ್ಧಾರ ವಿರುದ್ಧ ಹೋರಾಟ: ಶಿಕಾರಿಪುರದಲ್ಲಿ ಯಡಿಯೂರಪ್ಪ ನಿವಾಸ ಮೇಲೆ ಮುತ್ತಿಗೆ ಯತ್ನ, ಕಲ್ಲು ತೂರಾಟ

ಭವಿಷ್ಯದಲ್ಲಿ ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸದಿರಲು ನಿರ್ಧರಿಸಿದ್ದೇವೆ. ಯಡಿಯೂರಪ್ಪ ಬಂಜಾರ ತಾಂಡಾ ಅಭಿವೃದ್ಧಿ ಮಂಡಳಿ ಆರಂಭಿಸಿದ್ದು, ಯಾವುದೇ ಸಮಸ್ಯೆಗಳಿದ್ದರೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಒಳಮೀಸಲಾತಿ ವಿರುದ್ಧದ ಹೋರಾಟದ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಮತ್ತು ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. 

LEAVE A REPLY

Please enter your comment!
Please enter your name here