Home ಕರ್ನಾಟಕ ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ

ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ

27
0

ಬೆಂಗಳೂರು:

ಓಲಾ, ಉಬರ್ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹಾಗೂ ಅಖಿಲ ಕರ್ನಾಟಕ ಆದರ್ಶ ಆಟೋ ಚಾಲಕರ ಸಂಘದ ಅಧ್ಯಕ್ಷ ಚಂದ್ರು ಅವರು ತಮ್ಮ ಬೆಂಬಲಿಗ ಸಮೂಹದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರುಗಳ ಸಮ್ಮುಖದಲ್ಲಿ ಪಕ್ಷ ಸೇರಿದರು. ನಂತರ .ಡಿ.ಕೆ. ಶಿವಕುಮಾರ್ ಮಾತನಾಡಿ, ಚಾಲಕರ ಸಂಘದ ಅಧ್ಯಕ್ಷರಾಗಿರುವ ಹಾಗೂ ಜೆಡಿಎಸ್ ಸಾರಿಗೆ ವಿಭಾಗದ ಅಧ್ಯಕ್ಷರಾಗಿದ್ದ ತನ್ವೀರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎಂದರು .

ರಾಜ್ಯದಲ್ಲಿರುವ ಎಲ್ಲ ಚಾಲಕರ ಕಷ್ಟ ಹಾಗೂ ಸುಖದಲ್ಲಿ ಭಾಗಿಯಾಗಿ, ಅವರ ಹಿತ ಕಾಯಲು ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ’ ಎಂದರು.ಕೊರೋನಾ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ಆಟೋ, ಕ್ಯಾಬ್ ಚಾಲಕರಿಗೆ ಸರ್ಕಾರದಿಂದ ಸಹಾಯ ಸಿಗಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ನಾವು ಒತ್ತಡ ಹಾಕಿದೆವು. ತಿಂಗಳಿಗೆ ಕನಿಷ್ಠ 10 ಸಾವಿರ ಕೊಡಿ ಎಂದು ಒತ್ತಾಯ ಮಾಡಿದ್ದರೂ . ರಾಜ್ಯ ಸರ್ಕಾರ 7.75 ಲಕ್ಷ ಚಾಲಕರಿಗೆ ಒಂದು ಬಾರಿ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ನಮಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 32 ಲಕ್ಷ ಜನ ಪರವಾನಿಗೆ ಪಡೆದು ಚಾಲಕರಾಗಿ ದುಡಿಯುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here