Home Uncategorized ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡ

ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡ

14
0
bengaluru

ಐದೂವರೆ ಕೋಟಿ ವೆಚ್ಚದಲ್ಲಿ  ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಬೆಂಗಳೂರು: ಐದೂವರೆ ಕೋಟಿ ವೆಚ್ಚದಲ್ಲಿ  ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಕ್ರೀಡಾಂಗಣದ ಮೇಲ್ಛಾವಣಿಯ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಅವರಿಂದ ತಾಂತ್ರಿಕ ಸಲಹೆ ಪಡೆದು 5.64 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ಕಂಠೀರವ ಹೊರಾಂಗಣ ಕ್ರೀಡಾಂಗಣದ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದೆ. ಟಾಟಾ ಸೋಲಾರ್ ಬಿ.ಪಿ ಕಂಪನಿಯ 48.60 ಕೀಲೋ ವ್ಯಾಟ್ ಸಾಮರ್ಥ್ಯದ 90 ಸೋಲಾರ್ ಪ್ಯಾನಲ್‌ಗಳನ್ನು ಜೋಡಿಸಲಾಗಿದ್ದು, ಪ್ರತಿದಿನ 192 ಯೂನಿಟ್ ವಿದ್ಯುತ್ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಕಂಠೀರವ ಹೊರಾಂಗಣ ಕ್ರೀಡಾಂಗಣಕ್ಕಾಗಿ ಸುಮಾರು 70 ಕಿಲೋ ವ್ಯಾಟ್ ವಿದ್ಯುತ್ ಅವಶ್ಯಕತೆ ಇದೆ. ಸೋಲರ್‌ನಿಂದ ಉತ್ಪಾದನೆಯಾಗುವ ವಿದ್ಯುತ್ ಬಳಸಿಕೊಂಡು ಹೆಚ್ಚುವರಿ ವಿದ್ಯುತ್‌ನ್ನು 1 ಯೂನಿಟ್‌ಗೆ 3.19 ಪೈಸೆಯಂತೆ ಬೆಸ್ಕಾಂ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ. ಸೋಲಾರ್ ಪ್ಯಾನಲ್ ಅಳವಡಿಸಿರುವುದರಿಂದ ವಿದ್ಯುತ್ ಬಿಲ್‌ನಲ್ಲಿ ಕ್ರೀಡಾ ಇಲಾಖೆಗೆ ಐದಾರು ಲಕ್ಷ ರೂಪಾಯಿಯಷ್ಟು ಉಳಿಕೆ ಆಗಲಿದೆ ಎಂದಿದ್ದಾರೆ. 

ಬೆಂಗಳೂರಿನ ಶ್ರೀಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ.
ಕ್ರೀಡಾಂಗಣ ಮೇಲ್ಛಾವಣಿಯಲ್ಲಿ ನೀರು ಸೋರಿಕೆ ಆಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ತಾಂತ್ರಿಕ ಸಲಹೆ ಪಡೆದು, 5.64 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿ ಟಿಪಿಒ ಮೆಂಬ್ರೇನ್ ಹಾಕಿಸಲಾಗಿದೆ.

1/2 pic.twitter.com/0qRTGLnB24
— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) February 14, 2023

ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಯ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಕೆಲವು ಭಾಗಗಳಲ್ಲಿ  ಅರಳಿ ಗಿಡಗಳು ಹುಟ್ಟಿಕೊಂಡು ಕಟ್ಟಡಕ್ಕೆ ಧಕ್ಕೆಯಾಗುವ ಸಾಧ್ಯತೆ ಇತ್ತು. ಅಲ್ಲದೇ ಮಳೆ ಬಂದ ಸಂದರ್ಭದಲ್ಲಿ ನೀರು ಸೋರಿ ಅಸ್ತವ್ಯಸ್ತವಾಗುತ್ತಿತ್ತು. ಇದನ್ನು ಮನಗಂಡು ಕೂಡಲೇ ದುರಸ್ತಿಗೊಳಿಸುವಂತೆ ಸೂಚಿಸಲಾಗಿತ್ತು. ಬಿಎಂಎಸ್ ಎಂಜಿನಿಯರಿಂಗ್ ಕಾಲೇಜುರವರಿಂದ ತಾಂತ್ರಿಕ ಸಲಹೆ ಪಡೆದು ಸುಮಾರು ನೀರು ಸೋರದಂತೆ ದುರಸ್ತಿಗೊಳಿಸಲಾಗಿದೆ.  ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ‌ ಎಂದು ಅವರು ಮಾಹಿತಿ ನೀಡಿದ್ದಾರೆ.

 ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆವಹಿಸಿ, ಸೂಕ್ತ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಕಂಠೀರವ ಕ್ರೀಡಾಂಗಣ ಗ್ಯಾಲರಿ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದೆ‌‌. ಇದರಿಂದ ವಿದ್ಯುತ್ ಬಳಕೆ ಕಡಿಮೆಯಾಗಲಿದ್ದು, ಇಲಾಖೆಗೆ ಉಳಿತಾಯವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here