Home Uncategorized ಕಣ್ವ ಹಗರಣ: ಸಿಬಿಐ ತನಿಖೆಗೆ ಒಪ್ಪಿಸಲು ಸರ್ಕಾರ ಚಿಂತನೆ

ಕಣ್ವ ಹಗರಣ: ಸಿಬಿಐ ತನಿಖೆಗೆ ಒಪ್ಪಿಸಲು ಸರ್ಕಾರ ಚಿಂತನೆ

10
0
bengaluru

ಕಣ್ವ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಲು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್‌ ಅವರು ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು: ಕಣ್ವ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಲು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್‌ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಹಗರಣದಿಂದ ವಂಚನೆಗೊಳಗಾದವರ ಪ್ರತಿನಿಧಿಸುತ್ತಿರುವ ಸಂಘಟನೆಯು ಶನಿವಾರ ಸಚಿವ ಸೋಮಶೇಖರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಪ್ರಕರಣವನ್ನು ಸಿಐಡಿಯಿಂದ ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಸ್ ಟಿ ಸೋಮಶೇಖರ್ ಅವರು, ಸಾರ್ವಜನಿಕರ ಬೇಡಿಕೆಯ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ. ಸೋಮವಾರ ಮುಖ್ಯಮಂತ್ರಿಗಳ ಜೊತೆಗೆ ಈ ವಿಚಾರದ ಕುರಿತು ಚರ್ಚಿಸುತ್ತೇನೆ. ಮುಖ್ಯಮಂತ್ರಿಗಳ ಒಪ್ಪಿಗೆ ಬಳಿಕ ಅದನ್ನು ಸಂಪುಟ ಮುಂದೆ ಇರಿಸಲಾಗುತ್ತದೆ ಎಂದು ಹೇಳಿದರು.

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಗರಣ ಮತ್ತು ಶ್ರೀ ವಸಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಪ್ರಕರಣದಲ್ಲಿ ಕೈಗೊಂಡ ಕ್ರಮಗಳನ್ನೇ ಈ ಪ್ರಕರಣದಲ್ಲೂ ಕೈಗೊಳ್ಳಲು  ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಣ್ವ ಹಗರಣದ ಹಕ್ಕುದಾರರ ಹಿತರಕ್ಷಣಾ ವೇದಿಕೆಯ ಆಡಳಿತಾಧಿಕಾರಿ ಮುರಳೀಧರ ಲಕ್ಕಣ್ಣ ಅವರು ಮಾತನಾಡಿ, “ನವೆಂಬರ್ 2019 ರಿಂದ ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸುತ್ತಿದ್ದೆವು. ಕೊನೆಗೂ ನಮ್ಮ ಬೇಡಿಕೆಗೆ ಮನ್ನಣೆ ಸಿಕ್ಕಿರುವುದು ಸಮಾಧಾನ ತಂದಿದೆ. ಸಿಐಡಿ ತನಿಖೆ ನಮಗೆ ಸಮಾಧಾನ ತಂದಿಲ್ಲ. ಏಕೆಂದರೆ ಇಲ್ಲಿಯವರೆಗೆ ಠೇವಣಿ ಮಾಡಿದ ಹಣದಲ್ಲಿ ಕೇವಲ ಶೇ.40ರಷ್ಟು ಹಣ ಮಾತ್ರ ಗುರುತಿಸಲಾಗಿದೆ. ಉಳಿದ ಹಣದ ಕತೆಯೇನಾಗಬೇಕು ಎಂದು ಪ್ರಶ್ನಿಸಿದ್ದಾರೆ.

ಬಸವೇಶ್ವರನಗರದಲ್ಲಿರುವ ಕೇಂದ್ರ ಕಚೇರಿ ಮತ್ತು ರಾಜ್ಯದಾದ್ಯಂತ 45 ಶಾಖೆಗಳನ್ನು ಹೊಂದಿರುವ ಕಣ್ವ ಸೌಹಾರ್ದ ಕೋಪ್ ಲಿಮಿಟೆಡ್‌ನಲ್ಲಿ ಸಾವಿರಾರು ಜನರು ಲಕ್ಷಗಟ್ಟಲೆ ರೂಪಾಯಿಗಳನ್ನು ಠೇವಣಿ ಮಾಡಿದ್ದಾರೆ. ಠೇವಣಿಗಳ ಮೊತ್ತವನ್ನು ದ್ವಿಗುಣಗೊಳಿಸಿ ಕೊಡುವ ಆಮಿಷವನ್ನೊಂಡಿ ಕೋಟ್ಯಾಂತರ ರುಪಾಯಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಸಿಐಡಿ ತನಿಖೆ ನಡೆಸಿದ್ದು, 2002ರ ಮನಿ ಲಾಂಡರಿಂಗ್ ಕಾಯ್ದೆಯಡಿ ಮಾಲೀಕರ ವಿವಿಧ ಆಸ್ತಿಗಳನ್ನು ಜಪ್ತಿ ಮಾಡಿದೆ.

LEAVE A REPLY

Please enter your comment!
Please enter your name here