Home Uncategorized 'ಕನಿಷ್ಠ 100 ಮಕ್ಕಳನ್ನು ಕರೆತನ್ನಿ': ಹುಬ್ಬಳ್ಳಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಆದೇಶಿಸಿ ಶಿಕ್ಷಣ ಇಲಾಖೆ...

'ಕನಿಷ್ಠ 100 ಮಕ್ಕಳನ್ನು ಕರೆತನ್ನಿ': ಹುಬ್ಬಳ್ಳಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಪತ್ರ

17
0
bengaluru

ನಾಳೆ ಜನವರಿ 12ರ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಜನಸ್ತೋಮವನ್ನು ಸೇರಿಸುವುದು ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ.  ಹುಬ್ಬಳ್ಳಿ: ನಾಳೆ ಜನವರಿ 12ರ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಜನಸ್ತೋಮವನ್ನು ಸೇರಿಸುವುದು ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ. 

ಈ ನಿಟ್ಟಿನಲ್ಲಿ ಹುಬ್ಬಳ್ಳಿ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಪತ್ರ ಬರೆದಿರುವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ನಾಳೆಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ಕನಿಷ್ಠ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಸೂಚಿಸಿದ್ದಾರೆ.

ರೈಲ್ವೆ ಮೈದಾನಕ್ಕೆ ಹಾಜರಾಗುವ ಮುನ್ನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ಪ್ರಧಾನ ಮಂತ್ರಿಯವರು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 

The countdown has begun

24 hours to go!

Witness the magic of youth unfold in Hubballi-Dharwad at 26th National Youth Festival @narendramodi @ianuragthakur#NYKSYouthFestival #NationalYouthFestival #NYF2023 #NYF2023HubballiDharwad pic.twitter.com/nPuiIErxf4
— Pralhad Joshi (@JoshiPralhad) January 11, 2023

ಕಳೆದ ನವೆಂಬರ್ ನಲ್ಲಿ ಬೆಂಗಳೂರಿನ ಕೆಂಪೇಗೌಡ ಪ್ರತಿಮೆ ಅನಾವರಣ ಪ್ರಧಾನ ಮಂತ್ರಿಗಳು ಆಗಮಿಸಿದ್ದ ವೇಳೆ ಕೂಡ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯವಾಗಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಂತೆ ಸೂಚಿಸಲಾಗಿತ್ತು. ಇದಕ್ಕೆ ಹಲವರು ಟೀಕೆ ವ್ಯಕ್ತಪಡಿಸಿದ್ದರು. 

LEAVE A REPLY

Please enter your comment!
Please enter your name here