Home Uncategorized ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

9
0
bengaluru

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಅವರು ಬಳಲಿದ್ದರು. ಹೃದಯ ಕಾಯಿಲೆ ಹೊಂದಿದ್ದ ಅವರಿಗೆ ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ನಿನ್ನೆ ಡಿಸ್‌ಚಾರ್ಜ್‌ ಆಗಿ ಮನೆಗೆ ಬಂದಿದ್ದರು. ಅವರಿಗೆ ಪತ್ನಿ, ಮೂವರು ಹೆಣ್ಣುಮಕ್ಕಳಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ಕೆ.ವಿ. ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕ. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಆಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು ನಿವೃತ್ತಿ ಹೊಂದಿದ್ದರು.

ಅಕ್ಷಯ ಕಾವ್ಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತಿರುಮಲೇಶ್ ಅವರು ವಠಾರ ಸಂಕಲನದ ಮೂಲಕ ಕಾವ್ಯ ಕ್ಷೇತ್ರ ಪ್ರವೇಶಿಸಿದರು. ನಂತರ ಒಂಬತ್ತು ಕವನ ಸಂಕಲನ ಪ್ರಕಟಿಸಿದ್ದಾರೆ. ತಿರುಮಲೇಶ್ ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ. ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು.

bengaluru
bengaluru

LEAVE A REPLY

Please enter your comment!
Please enter your name here