Home Uncategorized ಕರ್ನಾಟಕ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ: ಪೂರ್ವನಿಗದಿಯಂತೆ ಕಾರ್ಯಕ್ರಮ

ಕರ್ನಾಟಕ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ: ಪೂರ್ವನಿಗದಿಯಂತೆ ಕಾರ್ಯಕ್ರಮ

0
0
bengaluru

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾಬೆನ್ ಮೋದಿ ಇಂದು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ತಾಯಿಯ ಅಂತಿಮ ವಿಧಿವಿಧಾನ ಕಾರ್ಯಗಳಲ್ಲಿ ಪ್ರಧಾನಿ ಮೋದಿ ಗುಜರಾತ್ ನ ಅಹಮದಾಬಾದ್ ನಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾಬೆನ್ ಮೋದಿ ಇಂದು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ತಾಯಿಯ ಅಂತಿಮ ವಿಧಿವಿಧಾನ ಕಾರ್ಯಗಳಲ್ಲಿ ಪ್ರಧಾನಿ ಮೋದಿ ಗುಜರಾತ್ ನ ಅಹಮದಾಬಾದ್ ನಲ್ಲಿ ಭಾಗಿಯಾಗಿದ್ದಾರೆ.

ಪ್ರಧಾನಿ ಮೋದಿಯವರ ಬಲಗೈಯಂತಿರುವ ಆಪ್ತ ಗುಜರಾತ್ ಮೂಲದ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಪ್ರಧಾನಿಯವರ ತಾಯಿಯ ಅಂತ್ಯಸಂಸ್ಕಾರ ಕಾರ್ಯದಲ್ಲಿ ಅಮಿತ್ ಶಾ ಭಾಗಿಯಾಗುತ್ತಾರೆಯೇ ಎಂಬ ಅನುಮಾನಗಳು ವ್ಯಕ್ತವಾಗಿದ್ದವು. 

ಆದರೆ ಅವರು ಪೂರ್ವನಿಗದಿಯಂತೆ ಬೆಂಗಳೂರು, ಮೈಸೂರು ಹಾಗೂ ಮಂಡ್ಯದಲ್ಲಿ ಇಂದು ಮತ್ತು ನಾಳೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ, ಗುಜರಾತ್ ಗೆ ತೆರಳುತ್ತಿಲ್ಲ ಎಂದು ಗೊತ್ತಾಗಿದೆ.ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗಜ್ಜಲಗೆರೆಯಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅದಕ್ಕೂ ಮುನ್ನ ಇಂದು ಬೆಂಗಳೂರಿನಲ್ಲಿ ಕೆಲವು ಕಾರ್ಯಕ್ರಮಗಳು ನಿಗದಿಯಾಗಿವೆ. ಸಿಡಿಟಿಐಗೆ ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರ ನಡೆಸುತ್ತಿರುವ ಪತ್ತೇದಾರಿ ತರಬೇತಿ ಶಾಲೆಯು ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಕೇರಳದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ಮರು ಕೌಶಲ್ಯವನ್ನು ಪೂರೈಸುತ್ತದೆ. ಒಂದು ದೊಡ್ಡ ಹೆಜ್ಜೆಯಾಗಿದ್ದು ಇದಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

bengaluru

Foundation stone of CDTI to be laid by ⁦@AmitShah⁩ ⁦@CMofKarnataka⁩ & ⁦@JnanendraAraga⁩ tom. This Detective Training School run by GOI will cater to the re-skilling of middle level police officers from Karnataka, Maharashtra, Tamil Nadu and Kerela. A big step. pic.twitter.com/VPKeoHNQvr
— DGP KARNATAKA (@DgpKarnataka) December 30, 2022

ಅಮಿತ್ ಶಾ ಸಕ್ಕರೆ ನಾಡಿಗೆ ಆಗಮಿಸುತ್ತಿರುವುದು ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಿಸಿದೆ. ಯಾತ್ರೆಯನ್ನು ಯಶಸ್ವಿಗೊಳಿಸುವುದಕ್ಕೆ ಎಲ್ಲರೂ ಟೊಂಕಕಟ್ಟಿ ನಿಂತಿದ್ದಾರೆ. ಪಕ್ಷದ ನಾಯಕರು ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವುದರೊಂದಿಗೆ ತಮ್ಮ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿ ಎಲ್ಲರೂ ನಿರತರಾಗಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿನ ಭೀತಿಯಿದೆ. ಹೀಗಾಗಿ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ರವರ ಅಂತ್ಯಸಂಸ್ಕಾರವನ್ನು ವಿಧಿವಿಧಾನಗಳೊಂದಿಗೆ ಬೇಗನೆ ಮುಗಿಸಿದ್ದು ಹತ್ತಿರದ ಕುಟುಂಬಸ್ಥರು ಮಾತ್ರ ಭಾಗವಹಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ಕುಟುಂಬಸ್ಥರು ಜನರಲ್ಲಿ ಮನವಿ ಮಾಡಿಕೊಂಡಿದ್ದರು. We thank everyone for their prayers in these tough times. It is our humble request to everyone to keep the departed soul in their thoughts and continue with their pre decided schedule and commitments. That would be a befitting tribute to Hiraba: PM Modi family Sources https://t.co/BHfAOASg48— ANI (@ANI) December 30, 2022

bengaluru

LEAVE A REPLY

Please enter your comment!
Please enter your name here