Home Uncategorized ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣ, ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ...

ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣ, ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

5
0
Advertisement
bengaluru

ಟಕ ರಾಜ್ಯ ನೆದರ್ಲೆಂಡ್ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲು ನಾವು ಬಯಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವವರ ಪೈಕಿ ಡಚ್ ಉದ್ಯಮಿಗಳು ಪ್ರಮುಖರಾಗಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ. ಬೆಂಗಳೂರು: “ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ನೆದರ್ಲೆಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಹಾಗೂ ಆ ದೇಶದ ಕಂಪನಿಗಳ ಪ್ರಮುಖರ ಜತೆ ಸಭೆ ನಡೆಸಿದ ಡಿ.ಕೆ. ಶಿವಕುಮಾರ್ “ಕರ್ನಾಟಕ ರಾಜ್ಯ ನೆದರ್ಲೆಂಡ್ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲು ನಾವು ಬಯಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವವರ ಪೈಕಿ ಡಚ್ ಉದ್ಯಮಿಗಳು ಪ್ರಮುಖರಾಗಿದ್ದಾರೆ. ಭಾರತದಲ್ಲಿ ನೆದರ್ಲೆಂಡ್ ಉದ್ಯಮಿಗಳ ಬಂಡವಾಳ ಹೂಡಿಕೆಯಲ್ಲಿ ಕರ್ನಾಟ ರಾಜ್ಯ ಶೇ.9ರಷ್ಟು ಬಂಡವಾಳವನ್ನು ಪಡೆದಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಡಚ್ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿವೆ. ಶೆಲ್ ಹಾಗೂ ಫಿಲಿಪ್ಸ್ ಕಂಪನಿಗಳ ಜಾಗತಿಕ ಕೇಂದ್ರಗಳು ಕರ್ನಾಟಕದಲ್ಲಿವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, 2022-23ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಅತಿದೊಡ್ಡ ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಿದೆ. ಆಮೂಲಕ ದೇಶದಲ್ಲಿನ ಹೂಡಿಕೆಯಲ್ಲಿ ಶೇ.25ರಷ್ಟು ಹೂಡಿಕೆ ಕರ್ನಾಟಕ ರಾಜ್ಯದಲ್ಲಿ ಆಗಿದೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ನೆದರ್ಲೆಂಡ್ ಕಂಪನಿಗಳು 1 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತ ಹೂಡಿಕೆ ಮಾಡಿ ಕಾರ್ಯನಿರ್ವಹಣೆ ಮಾಡುತ್ತಿವೆ. ಡಚ್ ಕಂಪನಿಗಳ ಜತೆಗಿನ ಈ ಬಾಂಧವ್ಯವನ್ನು ಮತ್ತಷ್ಟು ಸಧೃಡಗೊಳಿಸಲು ನಾವು ಉತ್ಸುಕರಾಗಿದ್ದೇವೆ. ಕರ್ನಾಟಕ ಹಾಗೂ ನೆದರ್ಲೆಂಡ್ ದೇಶ ಆಹಾರ ಉತ್ಪನ್ನ, ಜೈವಿಕ ತಂತ್ರಜ್ಞಾನ, ಫಾರ್ಮಾ, ಇನ್ನೋವೇಷನ್ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಸೇರಿದಂತೆ ಅನೇಕ ವಿಚಾರಗಳಲ್ಲಿ ಸಾಮ್ಯತೆಗಳನ್ನು ಹೊಂದಿವೆ. 

ಇದನ್ನೂ ಓದಿ: ಅಮೆರಿಕದ ಕಂಪನಿಗಳಿಂದ ಹೂಡಿಕೆ ಆಕರ್ಷಿಸಲು ಸೂಕ್ತ ವೇದಿಕೆ ರಚನೆ: ಎಂ.ಬಿ. ಪಾಟೀಲ್

bengaluru bengaluru

ಭಾರತದಲ್ಲಿ ಕರ್ನಾಟಕ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, 2016ರಿಂದಲೂ ಬಂಡವಾಳ ಆಕರ್ಷಿಸುವಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ಕಾಫಿ ಬೆಳೆಯುವ ರಾಜ್ಯ ಕರ್ನಾಟಕ. ಜೈವಿಕ ತಂತ್ರಜ್ಞಾನ ಉತ್ಪನ್ನ ಹಾಗೂ ರಫ್ತಿನಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ಭಾರತದ ಅನ್ವೇಷಣೆ ಸೂಚ್ಯಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ತಂತ್ರಜ್ಞಾನ ಮತ್ತು ಆವಿಷ್ಕಾರದಲ್ಲಿ ಬೆಂಗಳೂರು ವಿಶ್ವದಲ್ಲೇ ನಾಲ್ಕನೇ ಸ್ಥಾನ ಪಡೆದಿದೆ. ನಾವು ಶೇ.63ರಷ್ಟು ನವೀಕರಿಸಬಹುದಾದ ಇಂಧನದ ಮೇಲೆ ಅವಲಂಬಿತವಾಗಿದ್ದು, ನವೀಕರಿಸಬಹುದಾದ ಇಂಧನ ವಿಚಾರದಲ್ಲಿ ಮುಂಚೂಣಿಯಲ್ಲಿದ್ದೇವೆ. ವಿದ್ಯುತ್ ವಾಹನ, ಆವಿಷ್ಕಾರ, ವಸತಿ, 7 ಓಇಎಂ, 50ಕ್ಕೂ ಹೆಚ್ಚು ಕಾಪೋನೆಂಟ್ ಉತ್ಪಾದಕ ಹಾಗೂ 45ಕ್ಕೂ ಹೆಚ್ಚು ವಿದ್ಯುತ್ ವಾಹನಗಳ ಸ್ಟಾರ್ಟ್ ಅಪ್ ಗಳನ್ನು ಹೊಂದಿದ್ದೇವೆ. ವಿಶೇಷವಾಗಿ ಡಚ್ ಕಂಪನಿಗಳಿಗೆ ಉತ್ತಮ ಪ್ರೋತ್ಸಾಹ ನೀಡಲು ಅನೇಕ ನಿರ್ಧಾರ ಕೈಗೊಳ್ಳಲಾಗಿದೆ. 

ಇದನ್ನೂ ಓದಿ: ಎರಡನೇ ಹಂತದ ನಗರಗಳಲ್ಲಿಯೂ ಬಂಡವಾಳ ಹೂಡಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ

ನಾವು ಕೃತಕ ಬುದ್ಧಿಮತ್ತೆ(AI), ಉತ್ಪಾದನೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯಂತಹ ಕ್ಷೇತ್ರಗಳಿಗೆ ಪ್ರತ್ಯೇಕ ಕೈಗಾರಿಕ ನೀತಿ ಹೊಂದಿದ್ದೇವೆ.  ಈ ನೀತಿಯಲ್ಲಿ 6-10 ವರ್ಷಗಳವರೆಗೆ ವಾರ್ಷಿಕ ವಹಿವಾಟಿನಲ್ಲಿ 2.25% ಬಂಡವಾಳ ಉತ್ತೇಜನ ಸಬ್ಸಿಡಿ ನೀಡಲಾಗುವುದು. ಇದರ ಜೊತೆಗೆ ನಮ್ಮಲ್ಲಿ ಏರೋಸ್ಪೇಸ್, ರಕ್ಷಣೆ, ಸಂಚಾರ, ಸಂಶೋಧನೆ ಮತ್ತು ಅಭಿವೃದ್ಧಿ, ದತ್ತಾಂಶ ಕೇಂದ್ರ, ಮತ್ತು ಜವಳಿ ಕ್ಷೇತ್ರಗಳಿಗೆ ಪ್ರತ್ಯೇಕ ನೀತಿ ಹೊಂದಲಾಗಿದ್ದು, ಪ್ರತಿ ಕ್ಷೇತ್ರದಲ್ಲೂ ಬಂಡವಾಳ ಆಕರ್ಷಣೆಗೆ ಸಹಾಯಕವಾಗಿವೆ. ಉತ್ತಮ ಕಾರ್ಮಿಕ ನೀತಿ ಮೂಲಕ ಕಂಪನಿಗಳು ಹಾಗೂ ಉದ್ಯೋಗಿಗಳಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲಾಗಿದೆ. ಬಂಡವಾಳ ಹೂಡಿಕೆದಾರ ಸ್ನೇಹಿ ನೀತಿಗಳಿಂದಾಗ ಕರ್ನಾಟಕ ರಾಜ್ಯ 2022-23ನೇ ಸಾಲಿನಲ್ಲಿ 4.67 ಟ್ರಿಲಿಯನ್ ಬಂಡವಾಳವನ್ನು ಆಕರ್ಷಿಸಿದೆ. ಆ ಮೂಲಕ ಕರ್ನಾಟಕ ರಾಜ್ಯ 400 ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳ ತಾಣವಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.


bengaluru

LEAVE A REPLY

Please enter your comment!
Please enter your name here