Home Uncategorized ಕಲಬುರಗಿ: ಬಸ್​ ನಿಲ್ದಾಣದಲ್ಲಿ‌ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನೇ ಕದ್ದ ಖತರ್ನಾಕ್ ಗಳು!

ಕಲಬುರಗಿ: ಬಸ್​ ನಿಲ್ದಾಣದಲ್ಲಿ‌ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನೇ ಕದ್ದ ಖತರ್ನಾಕ್ ಗಳು!

10
0
bengaluru

ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ. ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.

ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ನಂಬರ್ 2 ಡಿಪೋಗೆ ಸೇರಿದ ಬಸ್ ಇದಾಗಿದೆ.

KA 38 F 971 ನಂಬರ್ ನ ಬಸ್ ಕಳ್ಳತನ ಮಾಡಿದ ಕಳ್ಳರು, ಮಿರಿಯಾಣ ಮಾರ್ಗವಾಗಿ ತಾಂಡೂರ ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇದರಿಂದಾಗಿ ಬಸ್ಸು ಹುಡುಕಾಟಕ್ಕೆ ಪೊಲೀಸರ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಈಗಾಗಲೇ ಎರಡು ಪೊಲೀಸ್ ತಂಡಗಳು ತೆಲಂಗಾಣದ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದೆ. ಸ್ಥಳಕ್ಕೆ ಚಿಂಚೋಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

bengaluru

LEAVE A REPLY

Please enter your comment!
Please enter your name here