Home Uncategorized ಕಲ್ಯಾಣ ಕರ್ನಾಟಕ ಭಾಗದ ಎರಡು ಜಿಲ್ಲೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ: ಕೇಸರಿ ಪಾಳಯದಲ್ಲಿ ಉತ್ಸಾಹ,...

ಕಲ್ಯಾಣ ಕರ್ನಾಟಕ ಭಾಗದ ಎರಡು ಜಿಲ್ಲೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ: ಕೇಸರಿ ಪಾಳಯದಲ್ಲಿ ಉತ್ಸಾಹ, ಬಿರುಸಿನ ಚಟುವಟಿಕೆ

4
0
bengaluru

ಕರ್ನಾಟಕ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ಕೆಲ ದಿನಗಳ ಹಿಂದೆ ಧಾರವಾಡಕ್ಕೆ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಬಂದು ಹೋಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ಮತ್ತೆ ಬರುತ್ತಿದ್ದಾರೆ. ಈ ಬಾರಿ ಬರುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಗೆ. ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕದ ಹ ಕಲಬುರಗಿ/ಯಾದಗಿರಿ: ಕರ್ನಾಟಕ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ಕೆಲ ದಿನಗಳ ಹಿಂದೆ ಧಾರವಾಡಕ್ಕೆ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಬಂದು ಹೋಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ಮತ್ತೆ ಬರುತ್ತಿದ್ದಾರೆ. ಈ ಬಾರಿ ಬರುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಗೆ. ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಇಂದು ಮೋದಿ ಹವಾ ಕಾಣಿಸಲಿದೆ. 

ಜಿಲ್ಲೆಗಳು ಕೇಸರಿಮಯ: ರಾಜ್ಯದ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಭಾಗಕ್ಕೆ ಬಂದು ಹೋಗಿರುವ ಪ್ರಧಾನಿ ಮೋದಿ, ಇಂದು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರಗಿ (Kalaburagi) ಮತ್ತು ಯಾದಗಿರಿ (Yadgir) ಬರುತ್ತಿರುವುದು ಈ ಭಾಗದ ಬಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಎರಡು ಜಿಲ್ಲೆಗಳು ಕೇಸರಿಮಯವಾಗಿವೆ.

ಎಲ್ಲಡೆ ರಾರಾಜಿಸುತ್ತಿರುವ ಕೇಸರಿ ಧ್ವಜಗಳು, ಪ್ರಧಾನಿ ಮೋದಿ ಬ್ಯಾನರ್ ಗಳು, ಕಟೌಟ್ ಗಳು, ಜಿಲ್ಲೆಗಳ ನಾಯಕರ ಫೋಟೋಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕಾಗಿ ನಿರ್ಮಾಣವಾಗಿರೋ ಬೃಹತ್ ವೇದಿಕೆ, ಪೊಲೀಸರ ಸರ್ಪಗಾವಲು ಕಂಡುಬರುತ್ತಿದೆ.

ಕಲಬುರಗಿಯಲ್ಲಿ ಏನು ಕಾರ್ಯಕ್ರಮ?: ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಇಂದು ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಮಾರು 50 ಸಾವಿರ ಕುಟುಂಬಗಳಿಗೆ ಭೂಮಿಯ ಹಕ್ಕು ಪತ್ರ ನೀಡಲಿದ್ದಾರೆ.

bengaluru

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ. ಅಲ್ಲಿಂದ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್‌ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಮಧ್ಯಾಹ್ನ 12ಕ್ಕೆ ಪ್ರಧಾನಿ ಮೋದಿ ಅವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ.

ಯಾದಗಿರಿ ಜಿಲ್ಲೆಗೆ ಭೇಟಿ: ಬಳಿಕ ಪ್ರಧಾನ ಮಂತ್ರಿಗಳು ಮಧ್ಯಾಹ್ನ 1 ಗಂಟೆಗೆ ಜಲ್‌ ಜೀವನ್‌ ಮಿಷನ್‌ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  ಅಲ್ಲಿಂದ ಕೊಡೆಕಲ್‌ ಹೆಲಿಪ್ಯಾಡ್‌ಗೆ ರಸ್ತೆ ಮೂಲಕ ಹೊರಡು ಹೆಲಿಪ್ಯಾಡ್‌ ಮೂಲಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಸಾಗಿ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಮಾಡಲಿದ್ದಾರೆ.

ಸಾಯಂಕಾಲ ಮುಂಬೈಗೆ: ಇಂದು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಅಪರಾಹ್ನದವರೆಗೆ ಇರುತ್ತದೆ. ನಂತರ, ಪ್ರಧಾನಿ ಮೋದಿ ಮುಂಬೈಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮುಂಬೈ ಮೆಟ್ರೋದ ಎರಡು ಮಾರ್ಗಗಳನ್ನು ಉದ್ಘಾಟಿಸಲಿದ್ದಾರೆ.

bengaluru

LEAVE A REPLY

Please enter your comment!
Please enter your name here