ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ.
ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ ಪಕ್ಷದ ಪರವಾಗಿ ಪ್ರಚಾರ ಮಾಡುವೆ ಎಂದೂ ಹೇಳಲಿಲ್ಲ. ಆದರೆ, ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆಂದು ಹೇಳಿದ್ದಾರೆ.
