ಮೈಸೂರು:
ಕನ್ನಡ ಸಾಹಿತ್ಯ ಪರಿಷತ್ತು ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಹೆಮ್ಮೆಯ ಸಂಸ್ಥೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ತಿಳಿಸಿದ್ದಾರೆ.
ಭಾನುವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನಕ್ಕೆ ಭೇಟಿ ನೀಡಿ ಅಧ್ಯಕ್ಷರಾದ ಡಾ.ವೈ.ಡಿ. ರಾಜಣ್ಣ ಹಾಗೂ ಪದಾಧಿಕಾರಿಗಳೊಂದಿಗೆ ಕನ್ನಡ ಚಟುವಟಿಕೆಗಳ ಬಗ್ಗೆ ವಿಚಾರ ವಿನಿಮಯ ಮಾಡಿ ಅವರು ಮಾತನಾಡಿದರು.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರ. ಅವರ ದೂರದೃಷ್ಟಿ ಆಲೋಚನೆಯಿಂದ ಆರಂಭಗೊಂಡ ಕನ್ನಡ ಸಾಹಿತ್ಯ ಪರಿಷತ್ತು ನೂರಾರು ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ ಎಂದು ಪ್ರಶಂಸಿದರು.