Home Uncategorized ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ, ಆಸ್ಪತ್ರೆಯಲ್ಲಿ...

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ, ಆಸ್ಪತ್ರೆಯಲ್ಲಿ ನಿಧನ

3
0
bengaluru

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023  ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು (shrishailappa bidarur) ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶ್ರೀಶೈಲಪ್ಪ ಜೀವ ಉಳಿಸಲು ಕಾಂಗ್ರೆಸ್ ನಾಯಕಿ ಡಾ.ವನಿತಾ ಪ್ರಯತ್ನಿಸಿದ ಕೊನೆ ಕ್ಷಣದ ವಿಡಿಯೋ

ಇಂದು(ನವೆಂಬರ್ 25) ಬೆಂಗಳೂರಿನ ಹೊರವಲಯದ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ  ಶ್ರೀಶೈಲಪ್ಪ ಅವರು ಸಭೆ ಆರಂಭದಲ್ಲೇ ವಾಂತಿಯಾಗಿ ಕುಸಿದುಬಿದ್ದಿದ್ದಾರೆ. ಕೂಡಲೇ  ಕಾರ್ಯಕರ್ತರು ಶ್ರೀಶೈಲಪ್ಪ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನದಿಂದಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೂಡಿದ್ದು, ನವೆಂಬರ್ 27ರಂದು ಜೂಮ್ ಮೂಲಕ ಸಭೆ ನಿಗದಿ ಮಾಡಿದ್ದಾರೆ.

bengaluru

ಶ್ರೀಶೈಲಪ್ಪ ಬಿದರೂರ‌ ರಾಜಕೀಯ ಇತಿಹಾಸ

25-06-1962 ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದಲ್ಲಿ ಜನಿಸಿದ್ದ ಶ್ರೀಶೈಲಪ್ಪ ಬಿದರೂರು, ಸೂಡಿಯ ಮಂಡಲ ಪಂಚಾಯತಿಯಿಂದ ರಾಜಕೀಯ ಆರಂಭಿಸಿದ್ದ ಶ್ರೀಶೈಲಪ್ಪ ಬಿದರೂರು, (ಟಿಡಿಬಿ) ತಾಲೂಕು ಡೆವೆಲಪ್ಮೆಂಟ್ ಬೋರ್ಡ್ ಗೂ ಆಯ್ಕೆಯಾಗಿದ್ದರು. ಮೂಲತಃ ಜನತಾ ಪರಿವಾರದಿಂದ ಬಂದವರಾಗಿದ್ದರು. ಅವರೊಬ್ಬ ರಾಜಕೀಯ ಮುತ್ಸದ್ದಿಯಾಗಿದ್ದರು.

ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಗದಗ ಜಿಲ್ಲೆಯ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಶ್ರೀಶೈಲಪ್ಪ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಅವರು ಕಳೆದ ವಿಧಾನಸಭಾ ಚುನಟವಣೆಯಲ್ಲಿ ಟಿಕೆಟ್​ ಸಿಗದಿದ್ದಕ್ಕೆ 2019ರಲ್ಲಿ ಕಾಂಗ್ರೆಸ್ ಸೇರಿದ್ದರು.

1994ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ರೋಣ ಮತಕ್ಷೇತ್ರದಿಂದ ಜನತಾದಳದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ವಿರುದ್ಧ ಗೆಲುವು ಪಡೆದಿದ್ದರು.
1999ರಲ್ಲಿ ಜನತಾದಳ ಇಬ್ಭಾಗವಾದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿ ರೋಣ ಮತ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.
2005-ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿ ಗದಗ ಜಿಲ್ಲೆ ಬಿಜೆಪಿ ಅಧ್ಯಕ್ಷರಾಗಿದ್ದರು.
2008 ಗದಗ ವಿಧಾನಸಭಾ ಮತಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದರಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಎಚ್.ಕೆ. ಪಾಟೀಲ್ ಅವರನ್ನು ಸೋಲಿಸಿದ್ದರು.
2012 ಡಿಸೆಂಬರ್ ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಕರ್ನಾಟಕ ಜನತಾ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡು ಕೆಜೆಪಿ ಗೆ ಬೆಂಬಲಿಸಿದ್ದ ಇವರು ಪುನಃ ತಮ್ಮ ನಡೆ ಬದಲಾಯಿಸಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
2013 ಗದಗ ವಿಧಾನಸಭಾ ಮತಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಧೀಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೇವಲ 18715 ಮತಗಳನ್ನು ಪಡೆದು ಕಾಂಗ್ರೆಸ್ ಪಕ್ಷದ ಎಚ್.ಕೆ. ಪಾಟೀಲ್ ಅವರ ವಿರುದ್ಧ ಠೇವಣಿ ಕಳೆದುಕೊಂಡಿದ್ದರು.* ಜನತಾ ದಳ ಮುಖಾಂತರ ರಾಜಕಾರಣ ಪ್ರಾರಂಬಿಸಿ ನಂತರ ಜೆಡಿಎಸ್ ಪಕ್ಷ ಸೇರಿ ತದನಂತರ ಬಿಜೆಪಿ  ಸೇರಿ 2008 ರಲ್ಲಿ ಗದಗ ವಿಧಾನ ಸಭಾ ಮತಕ್ಷೇತ್ರದ ಶಾಸಕರಾಗಿ ನಂತರ 2018 ರಲ್ಲಿ ಬಿಜೆಪಿ  ಟಿಕೆಟ್​ ನಿರಾಕರಿಸಿದ್ದರಿಂದ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದರು.
ಶ್ರೀಶೈಲಪ್ಪ ಬಿದರೂರು ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗದಗ /ರೋಣ ಕ್ಷೇತ್ರದಿಂದ ಸ್ಪರ್ಧಿಸಲು ದಿನಾಂಕ15.11.2022ರಂದು  ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದರು. ಆದ್ರೆ, ಡಿಕೆ ಶಿವಕುಮಾರ್ ಕರೆದಿದ್ದ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ದುರದೃಷ್ಟವಶಾತ್ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಘಾತವಾಗಿದ್ದು, ಆಸ್ಪತ್ರೆಗೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

bengaluru

LEAVE A REPLY

Please enter your comment!
Please enter your name here