Home Uncategorized ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹೋದರಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹೋದರಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

16
0

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿ ಸೇರಿ ಐವರ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ, ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿ ಸೇರಿ ಐವರ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ,

ಫೆಬ್ರವರಿ 23 ರಂದು ಲಗ್ಗೆರೆಯಲ್ಲಿರುವ ಮನೆಯೊಂದರಲ್ಲಿ ಮಹೇಶ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಾಸಕರ ಸಹೋದರಿ ಚಂದ್ರಕಲಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲ್ಲೆಗೊಳಗಾಗಿರುವ ಮಹೇಶ್ ಅವರು ಚಂದ್ರಕಲಾ ಅವರ ಸಂಬಂಧಿ ಶಿಲ್ಪಾ ಎಂಬುವವರನ್ನು ವಿವಾಹವಾಗಿದ್ದಾರೆ. ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಸಮಸ್ಯೆ ಬಗೆಹರಿಸಲು ಚಂದ್ರಕಲಾ ಮತ್ತಿತರರು ಮಹೇಶ್ ಮನೆಗೆ ಹೋಗಿದ್ದರು,

”ಚರ್ಚೆಯ ವೇಳೆ ತೀವ್ರ ವಾಗ್ವಾದ ನಡೆದಿದ್ದು, ನಂತರ ಚಂದ್ರಕಲಾ ಮತ್ತು ಇತರರು ಮಾರಾಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಸಹೋದರ ರಾಜು ಎಂಬುವವರು, ಚಂದ್ರಕಲಾ, ಶಿಲ್ಪಾ, ಆಕೆಯ ತಾಯಿ ಭಾಗ್ಯಮ್ಮ, ಶಿವಮ್ಮ, ಸುನೀತಾ ಮತ್ತು ಕಾರು ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ.

ಇದೀಗ ಆರೋಪಿಗಳು ತಲೆಮರೆಸಿಕೊಂಡಿದ್ದಾರೆನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗೆ ತೀವ್ರ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here