Home Uncategorized ಕಾಂಗ್ರೆಸ್ ಸಿದ್ಧಪಡಿಸಿದ ಊಟವನ್ನು ಬಿಜೆಪಿ ಬಡಿಸುತ್ತಿದೆ: ಹಕ್ಕುಪತ್ರ ವಿತರಣೆ ಕುರಿತು ಸಿದ್ದರಾಮಯ್ಯ ಕಿಡಿ

ಕಾಂಗ್ರೆಸ್ ಸಿದ್ಧಪಡಿಸಿದ ಊಟವನ್ನು ಬಿಜೆಪಿ ಬಡಿಸುತ್ತಿದೆ: ಹಕ್ಕುಪತ್ರ ವಿತರಣೆ ಕುರಿತು ಸಿದ್ದರಾಮಯ್ಯ ಕಿಡಿ

5
0
bengaluru

ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಅಲೆಮಾರಿ ಲಂಬಾಣಿ (ಬಂಜಾರ) ಬುಡಕಟ್ಟು ಜನಾಂಗದವರಿಗೆ ಹಕ್ಕುಪತ್ರ ವಿತರಿಸುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿಯು ತಮ್ಮ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ತಯಾರಿಸಿದ ಊಟವನ್ನು ಬಡಿಸುತ್ತಿದೆ ಎಂದು ಆರೋಪಿಸಿದರು. ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಅಲೆಮಾರಿ ಲಂಬಾಣಿ (ಬಂಜಾರ) ಬುಡಕಟ್ಟು ಜನಾಂಗದವರಿಗೆ ಹಕ್ಕುಪತ್ರ ವಿತರಿಸುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿಯು ತಮ್ಮ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ತಯಾರಿಸಿದ ಊಟವನ್ನು ಬಡಿಸುತ್ತಿದೆ ಎಂದು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯವರು ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನವನ್ನು ನೀಡಿದ್ದೇವೆ ಮತ್ತು ತಾವೇ ಕಾಯ್ದೆ ಮಾಡಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿರುವುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಬೊಮ್ಮಾಯಿ ಸರ್ಕಾರದ ಪ್ರಕಾರ, ಈ ‘ಹಕ್ಕು ಪತ್ರ’ಗಳನ್ನು ವಿತರಿಸುವ ಕ್ರಮವು ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ 52,072 ಅಲೆಮಾರಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಅವರಿಗೆ “ಶಾಶ್ವತ ಸೂರು” ಒದಗಿಸುತ್ತದೆ ಎಂದು ಹೇಳಿಕೊಂಡಿದೆ.

ಸಿದ್ದರಾಮಯ್ಯನವರ ಪ್ರಕಾರ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಪ್ರಕ್ರಿಯೆ 2013 ರಿಂದ 2018 ರವರೆಗಿನ ಅವರ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾಯಿತು. ಅಂದಿನ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಅವರು ತಮ್ಮ ನೇತೃತ್ವದ ಸರ್ಕಾರದಲ್ಲಿ ಅರಣ್ಯ ಕಾಯ್ದೆ ಮತ್ತು ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಉಳುವವನೇ ಭೂಮಿ ಒಡೆಯ ಮಾದರಿಯಲ್ಲಿ ವಾಸಿಸುವವನೇ ಮನೆಯೊಡೆಯ ಕಾಯ್ದೆ ಜಾರಿಗೆ ತಂದಿದ್ದರು. ಅವು ಐತಿಹಾಸಿಕ ತಿದ್ದುಪಡಿಗಳಾಗಿವೆ ಎಂದು ಹೇಳಿದರು.

bengaluru

ಇದನ್ನೂ ಓದಿ: ಕಲಬುರಗಿ: ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಪ್ರಧಾನಿ ಮೋದಿ

ಈ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕುರಿತು ವರದಿ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿ, ಅದನ್ನು ಅನುಷ್ಠಾನಗೊಳಿಸಲು ಐಎಎಸ್ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ಮಾಡಲಾಗಿತ್ತು ಎಂದು ಸಿದ್ದರಾಮಯ್ಯ ಅವರು ‘ಹಕ್ಕು ಪತ್ರ’ ವಿತರಣಾ ಕಾರ್ಯಕ್ರಮದ ಕುರಿತು ಪ್ರತಿಕ್ರಿಯೆ ನೀಡಿದರು.

ನಂತರ ಅಧಿಕಾರ ಕಳೆದುಕೊಂಡಿದ್ದರಿಂದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಸಾಧ್ಯವಾಗಲಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಏನನ್ನೂ ಮಾಡದ ಬಿಜೆಪಿಯವರು ಇದ್ದಕ್ಕಿದ್ದ ಹಾಗೆ ಎಲ್ಲವನ್ನೂ ತಾವೇ ಮಾಡಿದ್ದೇವೆ ಎಂದು ಹೇಳತೊಡಗಿದ್ದಾರೆ. ಮುಂಬರುವ ಚುನಾವಣೆ ಅಂಗವಾಗಿ ಬಿಜೆಪಿಯವರು ನಾವು ತಯಾರಿಸಿದ ಊಟವನ್ನು ಬಡಿಸುತ್ತಿದ್ದಾರೆ ಎಂದು ಹೇಳಿದರು.

ಲಂಬಾಣಿಗರಿಗೆ ಭೂಮಿಯ ಹಕ್ಕು ನೀಡುತ್ತಿದ್ದೇವೆ ಎಂದು ಬಿಂಬಿಸುವ ಮೂಲಕ ಬಿಜೆಪಿ ಪ್ರಧಾನಿಗೆ ತಪ್ಪು ಚಿತ್ರಣ ನೀಡುತ್ತಿದೆ ಎಂದು ಆರೋಪಿಸಿದರು.

bengaluru

LEAVE A REPLY

Please enter your comment!
Please enter your name here