Home Uncategorized ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ: ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ: ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

7
0

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಕುಮಾರಸ್ವಾಮಿ ದೇವಸ್ಥಾನದ ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಕುಮಾರಸ್ವಾಮಿ ದೇವಸ್ಥಾನದ ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಐದು ತಿಂಗಳ ಹಿಂದೆ ದೇವಾಲಯದ ಕಂಬವೊಂದು ಕುಸಿದು ಬಿದ್ದಿತ್ತು. ಇದಕ್ಕೆ ಪರಿಸರವಾದಿಗಳು ಮತ್ತು ಗ್ರಾಮಸ್ಥರು ಈ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಯೇ ಇದಕ್ಕೆ ಕಾರಣ ಎಂದು ಹೇಳಿದ್ದರು.

ಗಣಿಗಾರಿಕೆ ಸಂಬಂಧ ಕಾರ್ಯಕರ್ತ ಶ್ರೀಶೈಲ ಆಲದಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸರ್ಕಾರ ಸೇರಿ ಐದು ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿಗಳಾದ ಪಿ ಬಿ ವರ್ಲೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ, ನಾಲ್ಕು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ್ದಾರೆ.

ಕುಮಾರಸ್ವಾಮಿ ಬೆಟ್ಟವನ್ನು ಉಳಿಸಲು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆವು. ಈ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಎಂಟು ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಅವುಗಳಲ್ಲಿ ಕೆಲವು ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ. ಇದು ಎಎಸ್‌ಐ ಸಂರಕ್ಷಿತ ಪಾರ್ವತಿ ದೇವಸ್ಥಾನದ ಮೇಲೆ ಪರಿಣಾಮ ಬೀರಿದೆ. ಕಳೆದ ವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಎಎಸ್‌ಐ, ಗಣಿ ಮತ್ತು ಭೂವಿಜ್ಞಾನ, ಜಲಮಂಡಳಿ ಮತ್ತು ಅರಣ್ಯ ಸೇರಿದಂತೆ 12 ಇಲಾಖೆಗಳಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಆಲದಹಳ್ಳಿ ಹೇಳಿದ್ದಾರೆ.

ಪ್ರತಿದಿನ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಅದಿರು ಸಾಗಿಸುವ 3,000 ಟ್ರಕ್‌ಗಳು ಪ್ರತಿದಿನ ಸಂಚರಿಸುತ್ತವೆ. ಗಣಿಗಾರಿಕೆ ಪ್ರದೇಶಗಳಲ್ಲಿನ ಸ್ಫೋಟಗಳು ಮೀಸಲು ಅರಣ್ಯದಲ್ಲಿನ ವನ್ಯಜೀವಿಗಳ ಮೇಲೂ ಪರಿಣಾಮ ಬೀರಿವೆ.

ನಾನದಿ ಕಬ್ಬಿಣದ ಅದಿರು ಗಣಿ ಮತ್ತು ಜೆಎಸ್‌ಡಬ್ಲ್ಯೂ ಸ್ಟೀಲ್ ಪ್ಲಾಂಟ್‌ನ ಗಣಿಗಳು ದೇವಸ್ಥಾನದಿಂದ ಕೇವಲ 680 ಮೀಟರ್ ದೂರದಲ್ಲಿವೆ, ಸುಬ್ಬರಾಯನಹಳ್ಳಿ ಕಂಪನಿ ಮತ್ತು ಕೆಎಸ್‌ಎಂಸಿ ಲಿಮಿಟೆಡ್‌ನ ಗಣಿಗಳು ದೇಗುಲದಿಂದ 800 ಮೀಟರ್ ದೂರದಲ್ಲಿವೆ ಮತ್ತು ಎಂಎಸ್‌ಪಿಎಲ್ ಗಣಿ ಪ್ರದೇಶವು ದೇವಸ್ಥಾನದಿಂದ ಕೇವಲ 402 ಮೀಟರ್ ದೂರದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಗಣಿಗಾರಿಕೆ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಪರಿಶೀಲಿಸದಿದ್ದರೆ, ನಾವು ದೇವಾಲಯವನ್ನು ಮಾತ್ರವಲ್ಲದೆ ಈ ಪ್ರದೇಶದಲ್ಲಿನ ವನ್ಯಜೀವಿಗಳು ಮತ್ತು ಮೀಸಲು ಅರಣ್ಯವನ್ನು ಕೂಡ ಕಳೆದುಕೊಳ್ಳುತ್ತೇವೆ ಎಂದು ಆಲದಹಳ್ಳಿ ಕಳವಳ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here