Home Uncategorized ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವು

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವು

21
0
Advertisement
bengaluru

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ.  ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. 

ನಾಗರಾಜ್ ಹಾಗೂ ಸತೀಶ್ ಎಂಬವರ ಪುತ್ರರಾದ ಇವರು ಮನೆಯ ಹಿಂಭಾಗದಲ್ಲಿರುವ ಕಾವೇರಿ ನದಿ ದಂಡೆ ಮೇಲೆ ಮೀನು ಹಿಡಿಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಾಲಕರು ಅಣ್ಣ, ತಮ್ಮನ ಮಕ್ಕಳಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ನಂತರ ಕುಶಾಲ ನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
 


bengaluru

LEAVE A REPLY

Please enter your comment!
Please enter your name here