Home Uncategorized ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 97.5ರಷ್ಟು ಏರಿಕೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 97.5ರಷ್ಟು ಏರಿಕೆ

12
0
bengaluru

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ. ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ 2022ರ ಹಣಕಾಸು ವರ್ಷದ ಮುಕ್ಕಾಲು ಭಾಗದ ಪ್ರಯಾಣಿಕರ ದಟ್ಟಣೆ ಕುರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ಈ ಹಣಕಾಸು ವರ್ಷದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 7.12 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರು. ಆದರೆ, ಈ ವರ್ಷ 27.53 ಲಕ್ಷ ಪ್ರಯಾಣಿಕರು ಪ್ರಯಾಣಿಸಿರುವುದು ಕಂಡು ಬಂದಿದೆ.

ಡಿಸೆಂಬರ್ ಹಬ್ಬಗಳ ತಿಂಗಳಾಗಿದ್ದು, ಈ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಇದು 2021 ರ ಡಿಸೆಂಬರ್’ನ ಅಂಕಿ ಅಂಶಕ್ಕಿಂತ ದ್ವಿಗುಣವಾಗಿದ್ದು, ಅಂಕಿಅಂಶಗಳ ಪ್ರಕಾರ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2.27 ಕೋಟಿ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸಿರುವುದು ತಿಳಿದುಬಂದಿದೆ. 2021-2022 ರಲ್ಲಿ ಕೇವಲ 1.15 ಕೋಟಿ ಮಂದಿ ಪ್ರಯಾಣಿಸಿರುವುದು ಕಂಡು ಬಂದಿದೆ.

ಆದರೆ ಡಿಸೆಂಬರ್ 2021 ಕ್ಕೆ ಹೋಲಿಸಿದರೆ ಡಿಸೆಂಬರ್ 2022 ರಲ್ಲಿ ರಾಜ್ಯ ಇತರೆ ಎರಡು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ. ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿರುವುದು ಕಂಡು ಬಂದಿದೆ.

bengaluru

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುಮಾರು 2,000 ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9,000ದಷ್ಟು ಕಡಿಮೆಯಾಗಿರುವುದು ಕಂಡು ಬಂದಿದೆ.

ವಿಮಾನಯಾನ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಮಾತನಾಡಿ, ಲಾಕ್ಡೌನ್ ತೆಗೆದುಹಾಕಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಅವರು ಮಾತನಾಡಿ, ದೆಹಲಿ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಸ್ಪೈಸ್‌ಜೆಟ್‌ ಕಾರ್ಯಾಚರಣೆಯನ್ನು ನಿಲ್ಲಿಸಿರುವುದು ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here