ವಿಮಾನ ಹತ್ತುವ ಮುನ್ನ ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ 31 ವರ್ಷದ ಮಹಿಳಾ ಪ್ರಯಾಣಿಕೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ವಿಮಾನ ಹತ್ತುವ ಮುನ್ನ ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ 31 ವರ್ಷದ ಮಹಿಳಾ ಪ್ರಯಾಣಿಕೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣಿಕೆ ನೇಹಾ ಗುಪ್ತಾ ವಿರುದ್ಧ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಸುಶೀಲಾ ನೀಡಿದ ದೂರಿನ ಮೇರೆಗೆ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನೇಹಾ ವಿರುದ್ಧ ಐಪಿಸಿಯ ಸೆಕ್ಷನ್ 353 ಮತ್ತು ಸೆಕ್ಷನ್ 323ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಬೆಳಗಾವಿ: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು 24 ವರ್ಷದ ಯುವಕ ಆತ್ಮಹತ್ಯೆ!
ಪೊಲೀಸರ ಪ್ರಕಾರ, ನೇಹಾ ಏರ್ ಏಷ್ಯಾ ವಿಮಾನದ ಮೂಲಕ ಪಶ್ಚಿಮ ಬಂಗಾಳದ ಬಾಗ್ಡೋಗ್ರಾಕ್ಕೆ ಪ್ರಯಾಣಿಸಬೇಕಿತ್ತು. ಆಕೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದಳು. ಆಕೆ ತನ್ನ ಲಗೇಜ್ ಅನ್ನು ಚೆಕ್‌ಗಳಿಗಾಗಿ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಇರಿಸಿದ್ದರು. ನಂತರ ದೈಹಿಕ ತಪಾಸಣೆಗಾಗಿ ಲೇಡೀಸ್ ಫ್ರಿಸ್ಕಿಂಗ್ ಬೂತ್‌ಗೆ ಹೋಗುವಂತೆ ಮಾರ್ಗದರ್ಶನ ನೀಡಲಾಯಿತು. ಈ ವೇಳೆ ದೈಹಿಕ ಪರೀಕ್ಷೆಗೆ ಸಹಕರಿಸಲು ನಿರಾಕರಿಸಿ ಸಿಐಎಸ್‌ಎಫ್ ಸಿಬ್ಬಂದಿ ಸುಶೀಲಾ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಹಾ ಗುಪ್ತಾ ಭದ್ರತಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸಿಐಎಸ್ಎಫ್ ಉನ್ನತ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.