Home Uncategorized ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಜನವರಿ 3ಕ್ಕೆ ಪ್ರಕಟ

ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಜನವರಿ 3ಕ್ಕೆ ಪ್ರಕಟ

4
0
bengaluru

ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರು: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​ ಕುಮಾರ್ ಕಳೆದ ವಾರ ಬೆಳಗಾವಿಯ ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿತ್ತು. ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟಣೆ ಜನವರಿ 3,2023 ರಂದು ಪ್ರಕಟವಾಗಲಿದೆ @CMofKarnataka @BJP4Karnataka— Sunil Kumar Karkala (@karkalasunil) December 31, 2022

bengaluru

LEAVE A REPLY

Please enter your comment!
Please enter your name here