Home Uncategorized ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ : ಆರ್.ಅಶೋಕ್

ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ : ಆರ್.ಅಶೋಕ್

2
0
Advertisement
bengaluru

ಬೆಂಗಳೂರು: ಕಾಂಗ್ರೆಸ್ ಸರಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರ ತಂದ ಯೋಜನೆಗಳನ್ನು, ಕೇಂದ್ರ ಸರಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದರೂ ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ. ಬರ ಪರಿಹಾರ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ ಪರಿಹಾರವನ್ನು ಕಂತಾಗಿ ನೀಡಬಾರದು. ಹಿಂದಿನ ಬಿಜೆಪಿ ಸರಕಾರ ಪರಿಹಾರವನ್ನು ಒಂದೇ ಸಲಕ್ಕೆ ರೈತರ ಖಾತೆಗೆ ಹಾಕಿತ್ತು. ಈ ಸರಕಾರ ಕಂತು ಕಂತಾಗಿ ನೀಡುವುದು ತಪ್ಪು. ಕೇವಲ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸಲಾಗಿದೆ ಎಂದು ದೂರಿದರು.

ಮಕ್ಕಳಿಗೆ ಚಿಕ್ಕಿ ಮಿಠಾಯಿ ಕೊಟ್ಟು ಅವರ ಕೈಯಲ್ಲೇ ಶೌಚಾಲಯ ತೊಳೆಸಲಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿತ್ತು. ಮೆಟ್ರೊ ರೈಲು ಯೋಜನೆ ಕೇಂದ್ರ ಸರಕಾರದಿಂದ ಆಗಿದೆ. ಜಲಜೀವನ್ ಮಿಷನ್ ಕೂಡ ಕೇಂದ್ರದ ಕೊಡುಗೆ. ಆದರೂ ಅವೆಲ್ಲ ತಮ್ಮದೇ ಎಂದು ಹೇಳಿಕೊಂಡಿದ್ದಾರೆ. ಸರಕಾರ ಕಾನೂನು ಸುವ್ಯವಸ್ಥೆಯನ್ನೇ ಕಾಪಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ರೈತ ಆತ್ಮಹತ್ಯೆ ಹೆಚ್ಚಳ

bengaluru bengaluru

ಬರಗಾಲವಿದ್ದರೂ ಕಳೆದ ವರ್ಷಕ್ಕಿಂತ ಆತ್ಮಹತ್ಯೆ ಕಡಿಮೆಯಾಗಿದೆ ಎಂದು ಹೋಲಿಸಿಕೊಂಡಿದ್ದಾರೆ. ಇವರದ್ದೇ ಸರಕಾರದ ಸಚಿವ ಶಿವಾನಂದ ಪಾಟೀಲ್ ಅವರು ಪರಿಹಾರ ಪಡೆಯಲೆಂದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೀಳಾಗಿ ಮಾತಾಡಿದ್ದರು. ಆತ್ಮಹತ್ಯೆ ಹೆಚ್ಚಿದ್ದರೂ ಅದನ್ನು ಮುಚ್ಚಿಟ್ಟು ಸುಳ್ಳು ಹೇಳಿದ್ದಾರೆ. 2 ಸಾವಿರ ರೂ. ಪರಿಹಾರ ಎಂದು ಕಾಟಾಚಾರಕ್ಕೆ ಘೋಷಣೆ ಮಾಡಿ, ನಂತರ ಎಲ್ಲರಿಗೂ ಪರಿಹಾರ ನೀಡುವ ಕೆಲಸ ಮಾಡಿಲ್ಲ. ಫ್ರೂಟ್ಸ್ ತಂತ್ರಾಂಶದಲ್ಲಿ ಇನ್ನೂ ನೋಂದಣಿ ಸಮಸ್ಯೆ ಇದೆ. ಇಷ್ಟಿದ್ದರೂ ರೈತರಿಗೆ ಪರಿಹಾರ ನೀಡಿದ್ದೇವೆ ಎಂದೇ ನಾಚಿಕೆ ಇಲ್ಲದೆ ಹೇಳಿಕೊಂಡಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ನಿಂದಲೇ ಆರ್ಥಿಕ ಅಸಮಾನತೆ

ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿದೆ ಎನ್ನುತ್ತಾರೆ. ಆದರೆ ಗ್ಯಾರಂಟಿಗಾಗಿ ಖಜಾನೆ ಖಾಲಿ ಮಾಡಿಕೊಂಡ ಸರಕಾರ, ಶಾಸಕರಿಗೆ ಅನುದಾನ ನೀಡದೆ ಸತಾಯಿಸುತ್ತಿದೆ. ಯಾವ ಯೋಜನೆಗೂ ಹಣ ನೀಡದೆ ಗ್ಯಾರಂಟಿಗೆ ಮಾತ್ರ ಹಣ ಕೊಟ್ಟಿರುವುದೇ ಆರ್ಥಿಕ ಅಸಮಾನತೆ. ದಲಿತರ ಹಣವನ್ನು ಗ್ಯಾರಂಟಿಗಾಗಿ ಬಳಕೆ ಮಾಡಿರುವುದೇ ಆರ್ಥಿಕ ಅಸಮಾನತೆ. ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಕಳೆದ ಐದು ವರ್ಷಗಳಲ್ಲಿ 13.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇಂತಹ ಒಂದೂ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ ಎಂದರು.


bengaluru

LEAVE A REPLY

Please enter your comment!
Please enter your name here