Home Uncategorized ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು

ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು

9
0
Advertisement
bengaluru

ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ.  ಮಡಿಕೇರಿ: ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ. 

ಸೋಮವಾರಪೇಟೆ ತಾಲೂಕಿನ ಬಾಣಾವರ ಅರಣ್ಯ ವ್ಯಾಪ್ತಿಯ ಆದಿನಾದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೃತ ರೈತನನ್ನು ಬಣಗೇರಿ ಈರಪ್ಪ(63) ಎಂದು ಗುರುತಿಸಲಾಗಿದೆ. ಕಾಣೆಯಾದ ಹಸು ಹುಡುಕಿಕೊಂಡು ಹೋಗಿದ್ದ ರೈತನ ಮೇಲೆ ಆನೆ ದಾಳಿ ಮಾಡಿದೆ. ದಾಳಿಗೊಳಗಾದ ಈರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆನೆ ಓಡಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನು ಓದಿ: ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ​

bengaluru bengaluru

ಘಟನೆ ಕುರಿತು ಸೋಮವಾರಪೇಟೆ ಪೊಲೀಸರು ಹಾಗೂ ಸೋಮವಾರಪೇಟೆ ವಿಭಾಗದ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಮತ್ತಿತರರು ಭೇಟಿ ನೀಡಿದ್ದರು. 

ಈರಪ್ಪ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. 
ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಡಿಕೇರಿ ಡಿಸಿಎಫ್ ಎಟಿ ಪೂವಯ್ಯ ಅವರು ಆಸ್ಪತ್ರೆಯಲ್ಲಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಘಟನೆಯ ಮಾಹಿತಿ ಸಂಗ್ರಹಿಸಿದರು ಮತ್ತು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.


bengaluru

LEAVE A REPLY

Please enter your comment!
Please enter your name here