Home Uncategorized ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ, 24 ಗಂಟೆಯಲ್ಲಿ ಇಬ್ಬರ ಸಾವು

ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ, 24 ಗಂಟೆಯಲ್ಲಿ ಇಬ್ಬರ ಸಾವು

19
0
Advertisement
bengaluru

ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ವ್ಯಾಘ್ರ ದಾಳಿಗೆ ಸೊಮವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ಕಳೆದ 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮಕ್ಕೆ ಸೇರಿದ… ಕೊಡಗು: ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ವ್ಯಾಘ್ರ ದಾಳಿಗೆ ಸೊಮವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ಕಳೆದ 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮಕ್ಕೆ ಸೇರಿದ ಇಬ್ಬರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ, ಕೃಷಿ ಕಾರ್ಮಿಕ ರಾಜು(75) ಅವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಬೆಳಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರನೇ ದಾಳಿ ನಡೆಸಿದೆ. ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದ್ದರಿಂದ ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇದನ್ನು ಓದಿ: Tiger Attack in Kodagu: ಕೊಡಗಿನಲ್ಲಿ ಹುಲಿ ದಾಳಿಗೆ 12 ವರ್ಷದ ಬಾಲಕ ಸಾವು

ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ.

bengaluru bengaluru

ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್(18) ಎಂಬ ಯುವಕ ಮೃತಪಟ್ಟಿದ್ದರು.


bengaluru

LEAVE A REPLY

Please enter your comment!
Please enter your name here