Home ಕರ್ನಾಟಕ ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ; ಮುಖ್ಯಮಂತ್ರಿ

ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ; ಮುಖ್ಯಮಂತ್ರಿ

57
0

ಬೆಂಗಳೂರು:

ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಆಕರ್ಷಿಸಿದೆ. ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ, ಭಾರತದ ಮೊದಲ ವಲಯ-ನಿರ್ದಿಷ್ಟ 3,540 ಕೋಟಿ ರೂ. ಹೂಡಿಕೆಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ್ ಪರಿಕಲ್ಪನೆಗೆ ಅನುಗುಣವಾಗಿ, ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗಲಿದ್ದು, 20 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ತಿಳಿಸಿದರು.

ಅಭಿವೃದ್ಧಿಗೆ ಪೂರಕವಾಗಿರುವ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಕರ್ನಾಟಕ ಪ್ರೋತ್ಸಾಹಿಸುತ್ತಲೇ ಬಂದಿದೆ. ನಗರ ಚಲನಶೀಲತೆ, ಉಪಗ್ರಹ ತಂತ್ರಜ್ಞಾನ, ಸಾವಯವ ಕೃಷಿ, ಆಗ್ಮೆಂಟೆಡ್ ರಿಯಾಲಿಟಿ ಮೊದಲಾದ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ಕರ್ನಾಟಕದ 15 ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಟ್ವೀಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here