Home Uncategorized ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಸಿದ್ದು, ಡಿಕೆಶಿ ಸೇರಿ ಕರ್ನಾಟಕದ 13 ಕಾಂಗ್ರೆಸ್ ನಾಯಕರಿಗೆ ಕೋರ್ಟ್...

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಸಿದ್ದು, ಡಿಕೆಶಿ ಸೇರಿ ಕರ್ನಾಟಕದ 13 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

12
0

ಕೊರೊನಾ ನಿಯಮ ಉಲ್ಲಂಘಿಸಿ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 13 ಮಂದಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ‌. ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 13 ಮಂದಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ‌.

ಜನವರಿ 9ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಡಾ.ಜಿ.ಪರಮೇಶ್ವರ್‌, ಯು.ಟಿ.ಖಾದರ್‌, ವೀರಪ್ಪ ಮೊಯ್ಲಿ, ಕೆ.ಜೆ.ಜಾರ್ಜ್‌, ರಿಜ್ವಾನ್ ಅರ್ಷದ್‌, ಟಿ.ಬಿ.ಜಯಚಂದ್ರ, ಎಂ.ನಾರಾಯಣ ಸ್ವಾಮಿ, ಪರಮೇಶ್ವರ್ ನಾಯ್ಕ್‌, ಸಲೀಂ ಅಹ್ಮದ್‌, ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ನಲಪಾಡ್‌ ಅವರಿಗೆ ಸಮನ್ಸ್‌ ಜಾರಿ ಮಾಡಿದೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲು ಅಲ್ಲ: ಜೈರಾಮ್ ರಮೇಶ್

ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ಖಂಡಿಸಿ, ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ನಾಯಕರು ಅದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಕೊರೊನಾ ಮಾರ್ಗಸೂಚಿ ಗಾಳಿಗೆ ತೂರಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್​ ನಾಯಕರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗ ಸಮನ್ಸ್ ನೀಡಿದೆ.
 

LEAVE A REPLY

Please enter your comment!
Please enter your name here