Home Uncategorized ಕೋವಿಡ್‌ ಮುಂಜಾಗ್ರತಾ ಕ್ರಮಗಳೊಂದಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ: ಸಿಎಂ ಬೊಮ್ಮಾಯಿ

ಕೋವಿಡ್‌ ಮುಂಜಾಗ್ರತಾ ಕ್ರಮಗಳೊಂದಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ: ಸಿಎಂ ಬೊಮ್ಮಾಯಿ

12
0

ಹಾವೇರಿಯಲ್ಲಿ ಜನವರಿ 6 ರಿಂದ 8 ರವರೆಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಎಲ್ಲಾ ಕೋವಿಡ್ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು. ಹಾವೇರಿ: ಹಾವೇರಿಯಲ್ಲಿ ಜನವರಿ 6 ರಿಂದ 8 ರವರೆಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಎಲ್ಲಾ ಕೋವಿಡ್ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಶನಿವಾರ ತಮ್ಮ ಕ್ಷೇತ್ರ ಶಿಗ್ಗಾಂವಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಬೊಮ್ಮಾಯಿ ಅವರು, ಸಮ್ಮೇಳನವನ್ನು ತೆರೆದ ಮೈದಾನದಲ್ಲಿ ನಡೆಸಲಾಗುತ್ತಿದ್ದು, ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರೂ ವೈರಸ್ ಹರಡದಂತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮನವಿ ಮಾಡಿಕೊಂಡರು. ಇದಕ್ಕೂ ಮುನ್ನ ‘ಹಾವೇರಿಗೆ ಬನ್ನಿ, ನಮ್ಮ ಊರಿಗೆ ಬನ್ನಿ’ ಎಂಬ ಅಡಿಬರಹದಿಂದ ಮುದ್ರಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನದ 32 ಪುಟಗಳ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

ಹಾವೇರಿಯಲ್ಲಿ ನಡೆಯಲಿರುವ ಮುಂದಿನ ಸಾಹಿತ್ಯ ಸಮ್ಮೇಳನ ಹಿಂದೆಂದೂ ಕಾಣದ ಸಾಹಿತ್ಯ ಸಮ್ಮೇಳನವಾಗಲಿದೆ. ಸಮ್ಮೇಳನವು ಕನ್ನಡ ಮತ್ತು ಕರ್ನಾಟಕ ಸಂಸ್ಕೃತಿಯನ್ನು ಹರಡಲು ಸಹಾಯ ಮಾಡುತ್ತದೆ. ಹಾವೇರಿಯಲ್ಲಿ ನಡೆಯಲಿರುವ ಮೂರು ದಿನಗಳ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ಸಿನಲ್ಲಿ ಪಾಲ್ಗೊಳ್ಳುವಂತೆ ವಿನಂತಿಸುತ್ತೇನೆ ಎಂದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಾತನಾಡಿ, ಕನ್ನಡ ಭಾಷೆ, ನೆಲ ಮತ್ತು ಜಲವನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹಾರಾಷ್ಟ್ರದಲ್ಲಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದೇವೆ.

LEAVE A REPLY

Please enter your comment!
Please enter your name here